Sunday, August 14, 2022

Latest Posts

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ-ಗುಮಾಸ್ತರ ನೇಮಕಾತಿ ಪರೀಕ್ಷೆಗೆ ಆನ್‍ಲೈನ್ ತರಬೇತಿ

ಮಡಿಕೇರಿ : ಐ.ಬಿ.ಪಿ.ಎಸ್ ವತಿಯಿಂದ ರಾಷ್ಟ್ರೀಕೃತ ಬ್ಯಾಂಕ್‍ನವರು ಮುಂದಿನ ದಿನಗಳಲ್ಲಿ ಒಂಬತ್ತು ಸಾವಿರ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ವು 50 ದಿನಗಳ ತರಬೇತಿಯನ್ನು ಆನ್‍ಲೈನ್‍ನಲ್ಲಿ ನೀಡಲಿದೆ

ಆಸಕ್ತರು ಆಗಸ್ಟ್ 7 ರೊಳಗೆ (ರಜಾ ದಿನಗಳನ್ನು ಹೊರತುಪಡಿಸಿ) ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲ ಸಚಿವ ಪ್ರೊ. ಲಿಂಗರಾಜ ಗಾಂಧಿ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss