Sunday, June 26, 2022

Latest Posts

ರಾಷ್ಟ್ರೀಯ ಏಕತಾ ದಿನ: ಸರ್ದಾರ್​ ವಲ್ಲಭಭಾಯಿ ಪಟೇಲರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದ ಮೋದಿ

ಗಾಂಧಿನಗರ: ಸರ್ದಾರ್ ವಲ್ಲಭಭಾಯಿ ಪಟೇಲರ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೆವಾಡಿಯಾದಲ್ಲಿರುವ ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಭೇಟಿ ನೀಡಿ ಪುಷ್ಪಾರ್ಚನೆ ಸಲ್ಲಿಸಿದರು.

ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ ನರೇಂದ್ರ ಮೋದಿ ಗುಜರಾತ್’ನ  ಎರಡು ದಿನಗಳ ಪ್ರವಾಸದಲ್ಲಿದ್ದಾರೆ. ಇಂದು ಸರ್ದಾರ್ ವಲ್ಲಭಭಾಯಿ ಪಟೇಲರ ಜನ್ಮದಿನ ಹಿನ್ನೆಲೆಯಲ್ಲಿ ಕೆವಾಡಿಯಾದಲ್ಲಿರುವ ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಭೇಟಿ ನೀಡಿ ಪುಷ್ಪಾರ್ಚನೆ ಸಲ್ಲಿಸಿದರು.

ನಿನ್ನೆ ಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲರ ಜನ್ಮದಿನ ಪ್ರಯುಕ್ತ ಆಚರಿಸುವ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ  17 ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಇಂದು  ದೇಶದ ಮೊದಲ ಸೀ ಪ್ಲೇನ್ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss