Sunday, August 14, 2022

Latest Posts

ರಾಷ್ಟ್ರೀಯ ಶಿಕ್ಷಣ ನೀತಿಯು ದೇಶದ ಶಿಕ್ಷಣ ವ್ಯವಸ್ಥೆ ಪರಿವರ್ತಿಸುವ ಮಾರ್ಗದರ್ಶಿ: ಡಿಸಿಎಂ ಡಾ.ಸಿ.ಎಸ್.ಅಶ್ವಥ್‌ನಾರಾಯಣ್

ಹೊಸದಿಗಂತ ವರದಿ, ಮೈಸೂರು:

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಶಿಕ್ಷಣ ನೀತಿಯ ಅನುಷ್ಠಾನವು ಭಾರತೀಯ ಶಿಕ್ಷಣ ವ್ಯವಸ್ಥೆಯನ್ನು ಪರಿವರ್ತಿಸುವ ಮಾರ್ಗದರ್ಶಿ ಸೂತ್ರವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಡಾ.ಸಿ.ಎಸ್.ಅಶ್ವಥ್‌ನಾರಾಯಣ್ ಹೇಳಿದರು.
ಶನಿವಾರ ಮೈಸೂರಿನ ಮಾನಸಗಂಗೋತ್ರಿಯ ವಿಜ್ಞಾನಭವನದಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ, ಮೈಸೂರು ವಿಶ್ವವಿದ್ಯಾನಿಲಯ, ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಶೈಕ್ಷಣಿಕ ಮತ್ತು ಸಾಮಾಜಿಕ ಅಧ್ಯಯನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅನುಷ್ಠಾನ ಅವಕಾಶಗಳು ಮತ್ತು ಮುಂದಿನ ದಾರಿ ವಿಷಯ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ವರ್ಚುವಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,
ಈ ಕರಡು ನೀತಿಯು ದೇಶಾದ್ಯಂತ 2 ಲಕ್ಷಕ್ಕೂ ಹೆಚ್ಚು ಸಲಹೆಗಳನ್ನು ಪಡೆದಿದೆ. ಭಾರತದ ಸ್ವತಂತ್ರ ನಂತರದ ಸಾರ್ವಜನಿಕ ಚರ್ಚೆಯ ಸಾರ್ವಜನಿಕ ನೀತಿ ಎಂದು ಪರಿಗಣಿಸಲಾಗಿದೆ. ಹೀಗಾಗಿ, ಇದು ಎಲ್ಲಾ ಅಂಶಗಳಿoದ ಮಹತ್ವಾಕಾಂಕ್ಷೆಯ ನೀತಿಯಾಗಿದೆ. ನೀತಿಯ ಕೆಲವು ಶ್ಲಾಘನೀಯ ಮೂಲಭೂತ ತತ್ವಗಳು ಪ್ರತಿ ವಿದ್ಯಾರ್ಥಿಯ ವಿಶಿಷ್ಟ ಸಾಮರ್ಥ್ಯಗಳನ್ನು ಗುರುತಿಸುವುದು ಮತ್ತು ಬೆಳೆಸುವುದು, ಅವರು ಕಲಿಯಲು ಬಯಸುವದನ್ನು ಆಯ್ಕೆ ಮಾಡಲು ವಿದ್ಯಾರ್ಥಿಗಳಿಗೆ ಅವಕಾಶ ನೀಡುವುದು ಹಾಗೂ ವೃತ್ತಿಪರ ಮತ್ತು ಶೈಕ್ಷಣಿಕ ವ್ಯವಸ್ಥೆಯ ನಡುವೆ ವ್ಯತ್ಯಾಸವಿಲ್ಲ ಎಂದು ಹೇಳಿದರು.
ಈ ಹೊಸ ಶಿಕ್ಷಣ ನೀತಿಯು ಬಹುಮುಖಿಯಾಗಿದ್ದು, ಸಮಗ್ರ ಶಿಕ್ಷಣವನ್ನು ಸೂಚಿಸುತ್ತದೆ. ಸೃಜನಶೀಲತೆ ಮತ್ತು ವಿಮರ್ಶಾತ್ಮಕ ಚಿಂತನೆಯನ್ನು ಹುಟ್ಟುಹಾಕುವುದು, ನೈತಿಕತೆ ಮತ್ತು ಮಾನವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ನೀಡುವುದು, ಕಲಿಕೆಯ ಫಲಿತಾಂಶಗಳನ್ನು ನಿರ್ಣಯಿಸಲು ಎನ್‌ಇಪಿ 2020 ಬಹುಭಾಷಾ, ಜೀವನ ಕೌಶಲ್ಯ ಮತ್ತು ರಚನಾತ್ಮಕ ಮೌಲ್ಯಮಾಪನವನ್ನು ಉತ್ತೇಜಿಸಲಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಸುತ್ತೂರು ಮಠದ ಪೀಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಸ್ವಾತಂತ್ರ÷್ಯ ದೊರೆತು ಏಳು ದಶಕಗಳ ನಂತರ ನಮ್ಮದೇಯಾದಂತ ಸಮಗ್ರ ಶಿಕ್ಷಣ ನೀತಿ ಜಾರಿಗೆ ಬಂದಿದೆ. ಚರ್ಚೆಗೆ ಅವಕಾಶ ನೀಡಿ, ಎಲ್ಲರ ಅಭಿಪ್ರಾಯಗಳನ್ನು ಸಂಗ್ರಹಿಸಿ ಈ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ ಎಂದರು.ಶಿಕ್ಷಣ ನೀತಿಯನ್ನು ಏಕಾಏಕಿ ಜಾರಿಗೊಳಿಸದೇ ಹಂತ,ಹAತವಾಗಿ 10 ವರ್ಷಗಳ ಅವಧಿಯಲ್ಲಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ನಗರ, ಗ್ರಾಮೀಣ ಪ್ರದೇಶದ ಎಲ್ಲಾ ವಿದ್ಯಾರ್ಥಿಗಳಿಗೂ ಸಮಾನವಾಗಿ ಅವಕಾಶಗಳು, ಸವಲತ್ತು ದೊರೆಯಲಿದೆ ಎಂದು ತಿಳಿಸಿದರು.ಯುಜಿಸಿ ಸದಸ್ಯ ಡಾ.ಎಂ.ಕೆ.ಶ್ರೀಧರ್ ಮಾತನಾಡಿ, ಹೊಸ ಶಿಕ್ಷಣ ನೀತಿಯ ಅನುಷ್ಠಾನದಲ್ಲಿ ಉಳಿದೆಲ್ಲ ರಾಜ್ಯಗಳಿಗಿಂತ ಕರ್ನಾಟಕವು ಮುಂಚೂಣಿಯಲ್ಲಿದೆ. ಸರ್ಕಾರವು ಈ ನಿಟ್ಟಿನಲ್ಲಿ ಸಹಕಾರ ನೀಡುತ್ತಿದೆ. ನೂರು ವರ್ಷ ಪೂರೈಸಿರುವ ಅನೇಕ ಕಾಲೇಜುಗಳು ನಮ್ಮ ರಾಜ್ಯದಲ್ಲಿದ್ದು, ಉನ್ನತ ಶಿಕ್ಷಣದ ಪರಂಪರೆಯಿದೆ ಎಂದರು.ಕಾರ್ಯಕ್ರಮದಲ್ಲಿ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕುಲಸಚಿವ ಆರ್.ಶಿವಪ್ಪ, ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯ ಕುಲಪತಿ ಡಾ.ಎಸ್.ವಿದ್ಯಾಶಂಕರ್, ಕುಲಸಚಿವ ಡಾ.ಲಿಂಗರಾಜ್ ಗಾಂಧಿ, ಕೆಆರ್ ಎಂಎಸ್‌ಎಸ್ ಅಧ್ಯಕ್ಷ ಡಾ.ರಘುಅಕಮಂಚಿ, ಎಬಿಆರ್ ಎಸ್ ಎಂನ ಪ್ರಧಾನ ಕಾರ್ಯದರ್ಶಿ ಶಿವನಂದ ಸಿಡಂಕರ, ಅರುಣ್ ಶಹಾಪುರ, ಡಾ.ಗೋಪಾಲಕೃಷ್ಣ ಜೋಶಿ ಇತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss