Wednesday, August 10, 2022

Latest Posts

ರಾಹುಲ್​, ಪ್ರಿಯಾಂಕಾ ಹತ್ರಾಸ್​ ಭೇಟಿ ರಾಜಕೀಯ ಪ್ರೇರಿತ: ಸ್ಮೃತಿ ಇರಾನಿ ವಾಗ್ದಾಳಿ

ಹೊಸದಿಲ್ಲಿ: ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣ ಸಂಬಂಧಿಸಿ ಸಂತ್ರಸ್ತೆ ಕುಟುಂಬ ಭೇಟಿ ಮಾಡಲು ಮುಂದಾಗಿರುವ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಿರುದ್ಧ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.
‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹಾತ್ರಾಸ್ ಭೇಟಿ ರಾಜಕೀಯ ಪ್ರೇರಿತ. ಸಂತ್ರಸ್ತೆಯ ಕುಟುಂಬದವರಿಗೆ ನ್ಯಾಯ ಒದಗಿಸಿಕೊಡುವ ಉದ್ದೇಶದಿಂದ ಕೂಡಿದ್ದಲ್ಲ’ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಟೀಕಿಸಿದ್ದಾರೆ.
ಕಾಂಗ್ರೆಸ್​​ ತಂತ್ರಗಳ ಬಗ್ಗೆ ದೇಶದ ಜನರಿಗೆ ಗೊತ್ತಾಗಿದೆ. ಹೀಗಾಗಿ 2019ರಲ್ಲಿ ಭಾರತೀಯ ಜನತಾ ಪಾರ್ಟಿ ಐತಿಹಾಸಿಕ ಗೆಲುವು ದಾಖಲು ಮಾಡಿದೆ. ಈ ಭೇಟಿ ಕೇವಲ ರಾಜಕೀಯ ಪ್ರೇರಿತ ಎಂಬುದು ಜನರಿಗೆ ಈಗಾಗಲೇ ಗೊತ್ತಾಗಿದೆ ಎಂದಿದ್ದಾರೆ.
ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಅವರು ಗುರುವಾರ ಹಾತ್ರಾಸ್‌ಗೆ ತೆರಳಿ ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರನ್ನು ಭೇಟಿಯಾಗಲು ಮುಂದಾಗಿದ್ದರು. ಅವರನ್ನು ಉತ್ತರ ಪ್ರದೇಶ ಪೊಲೀಸರು ಮಾರ್ಗ ಮಧ್ಯದಲ್ಲೇ ತಡೆದಿದ್ದರು. ಇಂದು ಅವರು ಮತ್ತೊಮ್ಮೆ ಪ್ರಯಾಣ ಬೆಳೆಸಿದ್ದು, ರಾಹುಲ್​,ಪ್ರಿಯಾಂಕಾ ಸೇರಿ ಕೇವಲ ಐವರಿಗೆ ಅನುಮತಿ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss