ರಾಹುಲ್ ಗಾಂಧಿ ಬೆಂಬಲಿಸಿ ರಾಜ್ಯ ಕಾಂಗ್ರೆಸ್ ನಿಂದ ಹೈಡ್ರಾಮಾ: ಸಿದ್ದರಾಮಯ್ಯ ಸೇರಿ ಹಲವರನ್ನು ವಶಕ್ಕೆ ಪಡೆದ ಪೊಲೀಸರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಇಡಿ ಮುಂದೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದು, ಇತ್ತ ಇಡಿ ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನ ಇಡಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಬೆಂಗಳೂರು ನಗರದ ಲಾಲ್ ಬಾಗ್ ಗೇಟ್ ಮುಂಭಾಗದಲ್ಲಿ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಇಡಿ ಕಚೇರಿಗೆ ಮುತ್ತಿ ಹಾಕಲು ಯತ್ನಿಸಿದ್ದು, ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ಹಾಗೂ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.

ಲಾಲ್ ಬಾಗ್ ಗೇಟ್​​ನಿಂದ ಶಾಂತಿನಗರದ ಟಿಟಿಎಂಸಿಯಲ್ಲಿನ ಇಡಿ ಕಚೇರಿಗೆ ಕೈ ಕಾರ್ಯಕರ್ತರ ಜೊತೆಗೂಡಿ ಕೈ ನಾಯಕರು ಪ್ರತಿಭಟನಾ ಮೆರವಣಿಗೆ ನಡೆಸಿದರು. ನೂರಾರು ಕಾರ್ಯಕರ್ತರು ಈ ವೇಳೆ ಸಾಥ್​ ನೀಡಿದರು.ಈ ವೇಳೆ ಪೊಲೀಸರು ಮತ್ತು ಕೈ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.ಈ ವೇಳೆ ಬ್ಯಾರಿಕೇಡ್ ಹತ್ತಿ ಕೈ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಮುತ್ತಿಗೆ ಹಾಕಲು ಯತ್ನಿಸಿದ ಕೈ ನಾಯಕರು ಹಾಗೂ ಕೆಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್, ರಾಮಲಿಂಗೇಗೌಡ, ಪ್ರಿಯಾಂಕ್ ಖರ್ಗೆ ಸೇರಿ ಕೈ ನಾಯಕರನ್ನು ವಶಕ್ಕೆ ಪಡೆಯಲಾಯಿತು.

ಕಾಂಗ್ರೆಸ್ ಪ್ರತಿಭಟನೆಯಿಂದ ಡಬಲ್ ರೋಡ್, ಹೊಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು. ಸುಮಾರು ನಾಲ್ಕು ತಾಸಿಗೂ ಹೆಚ್ಚು ಕಾಲ ಸುತ್ತಮುತ್ತ ರಸ್ತೆಗಳಲ್ಲಿ ಭಾರಿ ಸಂಚಾರ ಅಡಚಣೆ ಉಂಟಾಯಿತು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್​​ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಆರ್.ವಿ. ದೇಶಪಾಂಡೆ, ಶಾಸಕರಾದ ಹ್ಯಾರಿಸ್, ರಂಗನಾಥ್, ಎಂಎಲ್​ಸಿ ಯು.ಬಿ. ವೆಂಕಟೇಶ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!