ನವದೆಹಲಿ: ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಇಬ್ಬರ ಮೇಲೆ ಇನ್ನೊಬ್ಬರು ಆರೋಪ – ಪ್ರತ್ಯಾರೋಪ ಮಾಡುತ್ತಿರುವುದು ಕಂಡು ಬಂದಿದೆ.
ಕಾಂಗ್ರೆಸ್ನ 23 ಹಿರಿಯ ಮುಖಂಡರು ಪಕ್ಷದಲ್ಲಿ ಪೂರ್ಣಾವಧಿ, ದಕ್ಷ ಹಾಗೂ ಪರಿಣಾಮಕಾರಿ ನಾಯಕತ್ವದ ಅಗತ್ಯವಿದೆ ಎಂದು ಉಲ್ಲೇಖಿಸಿ ಸೋನಿಯಾ ಗಾಂಧಿ ಅವರಿಗೆ ಎರಡು ದಿನಗಳ ಹಿಂದೆ ಪತ್ರ ಬರೆದಿದ್ದರು. ಅದೇ ವಿಚಾರವಾಗಿ ರಾಹುಲ್ ಗಾಂಧಿ ಸಿಡಬ್ಲೂಸಿ ಸಭೆಯಲ್ಲಿ ಕೆಲ ಹಿರಿಯ ಮುಖಂಡರ ಮೇಲೆ ವಾಗ್ದಾಳಿ ನಡೆಸಿದ್ದರು.
ಪತ್ರ ಬರೆದಿರುವ ಕೆಲ ನಾಯಕರು ಬಿಜೆಪಿ ಜತೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದ ಕೋಪಿತಗೊ೦ಡ್ಡಿದ ಕಪಿಲ್ ಸಿಬಲ್ , ನಾವು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ಆದರೆ ರಾಜಸ್ಥಾನ ಹೈಕೋರ್ಟ್ನಲ್ಲಿ ಕಾಂಗ್ರೆಸ್ ಪಕ್ಷ ಸಮರ್ಥಿಸಿಕೊಂಡಿದ್ದು ಹಾಗೂ ಮಣಿಪುರದಲ್ಲಿ ಬಿಜೆಪಿ ಸೋಲಿಸಿ ನಮ್ಮ ಪಕ್ಷ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದೇವೆ. ಕಳೆದ 30 ವರ್ಷಗಳಿಂದ ನಾನು ಯಾವುದೇ ವಿಚಾರದಲ್ಲೂ ಬಿಜೆಪಿ ಪರವಾದ ಹೇಳಿಕೆ ನೀಡಿಲ್ಲ. ಆದರೂ ನಾವು ಬಿಜೆಪಿ ಜತೆ ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ಟ್ವೀಟ್ ಮಾಡಿದ್ದರು.
ಟ್ವೀಟ್ ಡಿಲೀಟ್ ಮಾಡಿದ ಕಪಿಲ್ ಸಿಬಲ್!
ಬಳಿಕ ಅವರು ಈ ಟ್ವೀಟ್ ಅನ್ನು ಅಳಿಸಿ ಹಾಕಿದ್ದು, ಅದಕ್ಕೆ ಸ್ಪಷ್ಟೀಕರಣವಾಗಿ ಮತ್ತೊಂದು ಟ್ವೀಟ್ ಮಾಡಿದ್ದಾರೆ. ‘ತಾವು ಹೇಳಿದ್ದೆಂದು ಉಲ್ಲೇಖಿಸಲಾಗುತ್ತಿರುವ ಹೇಳಿಕೆಯನ್ನು ನೀಡಿಯೇ ಇಲ್ಲ ಎಂದು ರಾಹುಲ್ ಗಾಂಧಿ ಅವರು ವೈಯಕ್ತಿಕವಾಗಿ ನನಗೆ ತಿಳಿಸಿದ್ದಾರೆ. ಹೀಗಾಗಿ ನನ್ನ ಟ್ವೀಟ್ ಅನ್ನು ಹಿಂದಕ್ಕೆ ತೆಗೆದುಕೊಳ್ಳುತ್ತಿದ್ದೇನೆ’ ಎಂದು ಸಿಬಲ್ ಹೇಳಿದ್ದಾರೆ.
ಸ್ಪಷ್ಟನೆ ಕೊಟ್ಟ ರಣದೀಪ್ ಸಿಂಗ್ ಸುರ್ಜೇವಾಲ್
ಬಳಿಕ ರಾಹುಲ್ ಗಾಂಧಿ ಹೇಳಿಕೆಗೆ ಧ್ವನಿ ಗೂಡಿಸಿರುವ ರಣದೀಪ್ ಸಿಂಗ್ ಸುರ್ಜೇವಾಲ್, ಅವರು ನೀಡಿರುವ ಹೇಳಿಕೆಯಲ್ಲಿ ಸತ್ಯವಿದೆ. ಆದರೆ ಇದರಿಂದ ಹಿರಿಯ ಮುಖಂಡರು ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ.ಮಾಧ್ಯಮಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಯಿಂದ ಯಾರು ದಾರಿ ತಪ್ಪಬಾರದು. ಮೋದಿ ಆಡಳಿತದ ವಿರುದ್ಧ ಹೋರಾಡುವಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ತದನಂತರ ಪರಸ್ಪರ ಹಾಗೂ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡೋಣ ಎಂದಿದ್ದಾರೆ.