ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, June 24, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರೆಡ್ ಝೋನ್ ನಲ್ಲೂ ಮದ್ಯದಂಗಡಿ ಓಪನ್

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಹಿನ್ನಲೆ ಸ್ಥಗಿತವಾಗಿದ್ದ ಮದ್ಯಮಾರಟಕ್ಕೆ ಸರ್ಕಾರ ಅನುಮತಿ ನೀಡಿದೆ. ದೇಶಾದ್ಯಂತ ಕೊರೋನಾ ಲಾಕ್ ಡೌನ್ 3.0 ಜಾರಿಯಲ್ಲಿದ್ದು, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲಿರುವ ಆರ್ಥಿಕ ಹೊಣೆ ನಿವಾರಿಸಲು ದೇಶಾದ್ಯಂತ ಮದ್ಯ ಮಾರಾಟಕ್ಕೆ ಅನುಮತಿ ನೀಡಿದೆ.

ರಾಜ್ಯದಲ್ಲಿ ಕಂಟೈನ್ ಮೆಂಟ್ ಪ್ರದೇಶಗಳನ್ನು ಹೊರತು ಪಡಿಸಿ ಉಳಿದ ಕಡೆಗಳಲ್ಲಿ ಮದ್ಯ ಮಾರಾಟಕ್ಕೆ ಸರ್ಕಾರ ಅನುಮತಿ ನೀಡಿದೆ. ರೆಡ್ ಝೋನ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಗೃಹ ಇಲಾಖೆಯ ನಿಯಮಗಳಿಗೆ ಅನುಸಾರವಾಗಿ ಮಾರಾಟ ಆರಂಭವಾಗಲಿದ್ದು, ರೆಡ್ ಜೋನ್ ಗಳಲ್ಲಿ ಎಲ್ಲಾ ಮದ್ಯದಂಗಡಿಗಳು ತೆರೆಯಲು ಅವಕಾಶ ಇಲ್ಲ.

ರಾಜ್ಯದಲ್ಲಿ ಎಂ.ಆರ್.ಪಿ, ಎಂ.ಎಸ್.ಐ.ಎಲ್ ಮದ್ಯದಂಗಡಿಗಳಿಗೆ ಮಾತ್ರ ಅವಕಾಶ ನೀಡಿದ್ದು, ಈ ಅಂಗಡಿಗಳು ಮಾಲ್ ಗಳಲ್ಲಿ ಇದ್ದರೆ, ಅಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿರುವುದಿಲ್ಲ.

ರಾಜ್ಯದಲ್ಲಿ ಲಾಕ್ ಡೌನ್ ನಡುವಲ್ಲಿಯೂ ಬೆಳಗ್ಗೆ 9 ರಿಂದ ಸಂಜೆ 7ರ ವರೆಗು ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ರಾಜ್ಯದಲ್ಲಿನ ಆರೆಂಜ್ ಝೋನ್ ಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆ ಇರುವುದರಿಂದ ಆ ಪ್ರದೇಶದ ಎಲ್ಲಾ ಹಳ್ಳಿಗಳಲ್ಲೂ, ತಾಲೂಕುಗಳಲ್ಲೂ ಮದ್ಯದಂಗಡಿ ತೆರೆಯಲಿದೆ.

ರಾಜ್ಯದಲ್ಲಿ ಮದ್ಯ ಮಾರಟಕ್ಕೆ ವಿರೋಧ: ರಾಜ್ಯದಲ್ಲಿ ಮದ್ಯ ಮಾರಾಟ ಮಾಡಬಾರದೆಂದು ರಾಜ್ಯದ ಪ್ರಮುಖ ಧಾರ್ಮಿಕ ಸಂಸ್ಥೆಗಳ ಸ್ವಾಮೀಜಿಗಳು ಒತ್ತಾಯಿಸಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಅನೇಕರು ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ವಿರೋಧ ವ್ಯಕ್ತ ಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss