ಶಿವಮೊಗ್ಗ: ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗಿದ್ದು ಜನರಿಗೆ ಆಹಾರ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಪೋರ್ಟಬಿಲಿಟಿ ವ್ಯವಸ್ಥೆ ಮಾಡಲಾಗಿದೆ.
ಅಂದರೆ ಜಿಲ್ಲೆಯ ಪಡಿತರ ಕಾರ್ಡನ್ನು ಯಾವುದೇ ಜಿಲ್ಲೆಯ ಕಾರ್ಡದಾರರು ಯಾವುದೇ ಜಿಲ್ಲೆಯಲ್ಲಿ ಹಾಗೂ ಯಾವುದೇ ರಾಜ್ಯದ ಕಾರ್ಡುದಾರರು ಯಾವುದೇ ರಾಜ್ಯದಲ್ಲಿ ಪಡಿತರ ಪದಾರ್ಥಗಳನ್ನು ಪಡೆಬಹುದಾಗಿದೆ.
ಬೇರೆ ಜಿಲ್ಲೆಗಳಲ್ಲಿ ವಾಸವಿರುವವರು ತಮ್ಮ ಪಡಿತರ ಚೀಟಿಗಳನ್ನು ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಹಾಜರುಪಡಿಸಿ ಪಡಿತರ ಪದಾರ್ಥಗಳನ್ನು ಪಡೆಯಲು ಅವಕಾಶವಿರುತ್ತದೆ. ಏಪ್ರಿಲ್ ಮತ್ತು ಮೇ ತಿಂಗಳ ಮಾಹೆಗಳನ್ನು ಒಂದೇ ಬಾರಿ ಏಪ್ರಿಲ್ ನಲ್ಲಿ ಪಡೆಯಬಹುದಾಗಿದೆ. ಆಹಾರಧಾನ್ಯಗಳ ವಿತರಿಸುವ ಕುರಿತಾಗಿ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ.
ಬೇರೆ ಯಾವುದೇ ರಾಜ್ಯ ಅಥವಾ ಜಿಲ್ಲೆಯ ಪಡಿತರ ಕಾರ್ಡುದಾರರು ಶಿವಮೊಗ್ಗ ಜಿಲ್ಲೆಯ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ತಮ್ಮ ಪಾಲಿನ ಆಹಾರಧಾನ್ಯಗಳನ್ನು ಪಡೆಯಬಹುದಾಗಿದೆ. ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.