ಹೊಸ ದಿಗಂತ ವರದಿ, ಶಿವಮೊಗ್ಗ:
ಈ ಬಾರಿ ರೈತಪರ ಬಜೆಟ್ ನೀಡಲು ಪ್ರಯತ್ನ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
ಶಿಕಾರಿಪುರದಲ್ಲಿ ಕೆಡಿಪಿ ಸಭೆ ಬಳಿಕ ಮಾತನಾಡಿ, ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.
ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಆಸ್ಪದವಾಗದಂತೆ, ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಕಳಪೆ ಕಾಮಗಾರಿ ಸಹಿಸುವುದಿಲ್ಲ ಎಂದರು.
ನೀರಾವರಿಗೆ ಹೆಚ್ಚಿನ ಅನುದಾನ ಒದಗಿಸಿದ್ದೇನೆ. ಕಾಮಗಾರಿಗಳು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಎಂದ ಅವರು, ಶಿಕಾರಿಪುರ ಮಾದರಿ ತಾಲೂಕು ಮಾಡುವುದು ನನ್ನ ಗುರಿ. ಅಧಿಕಾರಿಗಳು ಇದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.