ಹೊಸದಿಗಂತ ಆನ್ಲೈನ್ ಡೆಸ್ಕ್:
ಕೇಂದ್ರ ಸರ್ಕಾರದ ಕೃಷಿ ಕಾನೂನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡಿದ್ದ ಸಿಖ್ ಗುರುವೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರತಿಭಟನಾ ಸ್ಥಳವಾದ ಸಿಂಘು ಗಡಿಯಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕರ್ನಾಲ್ನ ಸಿಂಗ್ರಾ ಗ್ರಾಮದ ಸಂತ ರಾಮ್ ಸಿಂಗ್ ಮೃತರು.
ಸ್ಥಳದಲ್ಲಿ ಡೆತ್ನೋಟ್ ಸಿಕ್ಕಿದ್ದು, ರೈತರ ನೋವು ಸಹಿಸಲು ಆಗುತ್ತಿಲ್ಲ ಎಂದು ಬರೆದಿದೆ. ಪತ್ರವನ್ನು ಪರಿಶೀಲನೆ ಮಾಡಲಾಗುತ್ತಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಪ್ರತಿಭಟನೆ ಸ್ಥಳದಲ್ಲಿ ತಮ್ಮ ಕಾರಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸಂತ ರಾಮ್ ಸಿಂಗ್ ಅವರ ಸಾವಿಗೆ ಹರಿಯಾಣ ಮುಖ್ಯಮಂತ್ರಿ ಎಂ.ಎಲ್ ಖಟ್ಟರ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.