Monday, August 15, 2022

Latest Posts

ರೈತರ ಪ್ರತಿಭಟನೆ: ಸಮಿತಿ ರಚಿಸಿ, ಸಮಸ್ಯೆ ಬಗೆಹರಿಸುವಂತೆ ಸುಪ್ರೀಂಕೋರ್ಟ್ ಸೂಚನೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರ ನಡೆಸುತ್ತಿರುವ ಪ್ರತಿಭಟನೆಗೆ ಆಕ್ಷೇಪಿಸಿರುವ ಸುಪ್ರೀಂಕೋರ್ಟ್, ಸರ್ಕಾರ ಹಾಗೂ ರೈತರ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸಿ, ಸಮಸ್ಯೆ ಬಗೆಹರಿಸುವಂತೆ ಸೂಚಿಸಿದೆ.
ಪ್ರತಿಭಟನೆ ಸಂಬಂಧಿಸಿ ಅರ್ಜಿಗಳ ವಿಚಾರಣೆ ಕೈಗೆತ್ತಿಗೊಂಡ ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ನ್ಯಾಯಪೀಠ, ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ರಾಷ್ಟ್ರ ಮಟ್ಟದ ವಿಷಯವಾಗುವ ಮುನ್ನ ಪರಿಹಾರ ಕಂಡುಕೊಳ್ಳಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ಸದ್ಯ ನ್ಯಾಯಮೂರ್ತಿ ಎ. ಎಸ್. ಬೋಪಣ್ಣ ಹಾಗೂ ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ಅವರನ್ನು ಸೇರಿದಂತೆ ಸರ್ಕಾರ ಮತ್ತು ರೈತ ಪ್ರತಿನಿಧಿಗಳನ್ನೊಳಗೊಂಡ ಸಮಿತಿ ರಚಿಸಲಾಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಪ್ರತಿಭಟನೆ ಕುರಿತು ದೆಹಲಿ, ಪಂಜಾಬ್, ಹರಿಯಾಣ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿ ನಾಳೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.
ರೈತರೊಂದಿಗೆ ನೀವು ನಡೆಸುತ್ತಿರುವ ಮಾತುಕತೆಗಳು ಕೆಲಸ ಮಾಡುತ್ತಿಲ್ಲ. ಅವುಗಳು ವಿಫಲಗೊಳ್ಳುತ್ತಿದೆ ಎಂದು ನ್ಯಾಯಪೀಠ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ತಿಳಿಸಿದ್ದು, ಇದೇ ವೇಳೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸರ್ಕಾರ, ನಾವು ಮಾತುಕತೆಗೆ ಸಿದ್ಧವಿದ್ದೇವೆ. ನಾವು ರೈತರಿಗೆ ವಿರುದ್ಧವಾಗಿ ಏನೂ ಮಾಡುವುದಿಲ್ಲ. ವಿವಿಧ ಇಲಾಖೆಗಳ ಮಂತ್ರಿಗಳು ಈಗಾಗಲೇ ರೈತರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಸ್ಪಷ್ಟನೆ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss