ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೇಂದ್ರ ಸರ್ಕಾರದ ಕೃಷಿ ಕಾನೂನು ವಿರುದ್ಧ ಪ್ರತಿಭಟಿಸುತ್ತಿರುವ ಕಿಸಾನ್ ಮಜ್ದೂರ್ ಸಂಘದ 60 ರೈತರ ನಿಯೋಗವು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಗುರುವಾರ ಭೇಟಿ ಮಾಡಿದೆ.
ಕೇಂದ್ರ ಸರ್ಕಾರ ತಾನು, ಎಲ್ಲಾ ಸಮಸ್ಯೆಗಳ ಕುರಿತು ಮುಕ್ತ ಮಾತುಕತೆಗೆ ಸಿದ್ಧವಿದ್ದು, ಅದಕ್ಕೆ ನೀವೇ ದಿನಾಂಕ ಮತ್ತು ಸಮಯ ನಿಗದಿಪಡಿಸುವಂತೆ ನರೇಂದ್ರ ಸಿಂಗ್ ತೋಮರ್ ಬುಧವಾರ ವಿನಂತಿಸಿಕೊಂಡಿದ್ದರು.
ಕೃಷಿ ಕಾಯ್ದೆಗಳಿಗೆ ಸಂಬಂಧಿಸಿ ಸ್ಪಷ್ಟ ಮತ್ತು ಲಿಖಿತ ಪ್ರಸ್ತಾವ ಮುಂದಿಟ್ಟರೆ ಮಾತ್ರ ಸರ್ಕಾರದೊಂದಿಗೆ ಮಾತುಕತೆ ಸಾಧ್ಯ ಎಂದು ರೈತರ ಸಂಘಟನೆಗಳ ಮುಖಂಡರು ತಿಳಿಸಿದ್ದರು.
ಈ ವಿಚಾರವಾಗಿ ಮಾತುಕತೆ ನಡೆಸಲು ರೈತ ಮುಖಂಡರು ನವದೆಹಲಿಯ ಕೃಷಿ ಭವನದಲ್ಲಿ ನರೇಂದ್ರ ಸಿಂಗ್ ತೋಮರ್ ಅವರನ್ನು ಗುರುವಾರ ಭೇಟಿ ಮಾಡಿದ್ದಾರೆ.