Saturday, July 2, 2022

Latest Posts

ರೈಲಿನಲ್ಲಿ ಮತ್ತೆ ಇ-ಕ್ಯಾಟರಿಂಗ್ ಸೇವೆ ಪ್ರಾರಂಭ: ಅನುಮತಿ ನೀಡಿದ ರೈಲ್ವೆ ಇಲಾಖೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರೈಲಿನಲ್ಲಿ ಇ-ಕ್ಯಾಟರಿಂಗ್ ಸೇವೆ ಮತ್ತೆ ಪ್ರಾರಂಭಿಸಲು ಭಾರತೀಯ ರೈಲ್ವೆ ಇಲಾಖೆ ಅನುಮತಿ ನೀಡಿದೆ.

ಆಯಾ ರಾಜ್ಯ ಸರ್ಕಾರಗಳ ಆರೋಗ್ಯ ಸುರಕ್ಷಿತ ಕ್ರಮಗಳು ಹಾಗೂ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿ ಇ-ಕ್ಯಾಟರಿಂಗ್ ಸೇವೆ ಒದಗಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

ಇ-ಕ್ಯಾಟರಿಂಗ್ ಸೇವೆಗಳನ್ನು ಮಾಡಲಿರುವ ರೆಸ್ಟೋರೆಂಟ್ ಗಳು ತಮ್ಮ ಸಿಬ್ಬಂದಿಯ ಆರೋಗ್ಯದ ಕಡೆ ಗಮನ ಹರಿಸಬೇಕಿದ್ದು, ಡೆಲಿವರಿ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್, ಫೇಸ್ ಶೀಲ್ಡ್ ಬಳಸಿ ಕೊರೋನಾ ನಿಯಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಿದೆ.

ಕೊರೋನಾ ಭೀತಿಯಿಂದ ದೇಶದಲ್ಲಿ ಇ-ಕ್ಯಾಟರಿಂಗ್ ಸೇವೆ ಸ್ಥಗಿತಗೊಳಿಸಲಾಗಿತ್ತು. ಆದರೆ ಇದೀಗ ಐಆರ್‌ಸಿಟಿಸಿ, ರೈಲ್ವೆ ಸಚಿವಾಲಯಕ್ಕೆ ಪತ್ರ ಬರೆದ ಬಳಿಕ ಅನುಮತಿ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss