ಬೆಳಗಾವಿ: ಪ್ರಯಾಣಿಕರಿಗೆ ಅನುಕೂಲವಾಗುವಂತೆ ಇನ್ನಷ್ಟು ವಿಸ್ತರಿಸಲು ರೈಲ್ವೆ ಸಂಚಾರ ವ್ಯವಸ್ಥೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ಪ್ರೇರೇಪಿಸಲು ಯೋಜನೆ ರೂಪಿಸಲಾಗಿದೆ ಹೊರತು ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮಾಡುತ್ತಿಲ್ಲ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಸ್ಪಷ್ಟಪಡಿಸಿದ್ದಾರೆ.
ಅವರು ಭಾನುವಾರ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮಾಡಲಾಗುತ್ತಿದೆ ಎಂದು ಆರೋಪಿಸುವ ಅಗತ್ಯವಿಲ್ಲ. ಸಂಪೂರ್ಣ ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮಾಡುತ್ತಿಲ್ಲ ಸ್ಪಷ್ಟ ಪಡಿಸಿದರು.
ರೈಲ್ವೆ ಸಂಚಾರ ವ್ಯವಸ್ಥೆಯು ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೂಪಿಸಲು ಯೋಜಿಸಲಾಗಿದೆ. ಖಾಸಗೀಕರಣಕ್ಕೆ ಅವಕಾಶ ನೀಡಿದಲ್ಲಿ ಉದ್ಯೋಗಾವಕಾಶ, ಆರ್ಥಿಕತೆ ಹೆಚ್ಚಾಗುತ್ತದೆ ಎಂದರು.
ಒಂದು ರೈಲು ಬಂದು ಹೋದ ನಂತರ ನಿಲ್ದಾಣ ಖಾಲಿ ಇರುತ್ತದೆ. ಮತ್ತಷ್ಟು ರೈಲುಗಳು ಅಲ್ಲಿ ಬರಲಿ, ಜನರಿಗೆ ಅನುಕೂಲ ಆಗಲಿ, ದೇಶದ ಆರ್ಥಿಕತೆ ಬೆಳೆಯಲಿ, ಉದ್ಯೋಗಗಳು ಸೃಷ್ಟಿಯಾಗಲಿ ಎನ್ನುವುದು ಇದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದು ಸಚಿವ ಸುರೇಶ ಅಂಗಡಿ ಹೇಳಿದರು.