ಹೊಸದಿಗಂತ ಆನ್ಲೈನ್ ಡೆಸ್ಕ್:
ಒಡಿಶಾದ ರೊರ್ಕೆಲಾ ಸ್ಟೀಲ್ ಪ್ಲಾಂಟ್ನಲ್ಲಿ ವಿಷಾನಿಲ ಸೋರಿಕೆಯಾಗಿದ್ದು,ಇಬ್ಬರು ಮೃತಪಟ್ಟಿದ್ದಾರೆ.
ಕಲ್ಲಿದ್ದಲು ರಾಸಾಯನಿಕ ವಿಭಾಗದ ಸ್ಟೀಲ್ ಪ್ಲಾಂಟ್ನಲ್ಲಿ ಇಂದು ಬೆಳಿಗ್ಗೆ 9:45 ರ ಸುಮಾರಿಗೆ ವಿಷ ಅನಿಲ ಕಾರ್ಬನ್ ಮೊನಾಕ್ಸೈಡ್ ಸೋರಿಕೆಯಾಗಿದೆ. ಇದರಿಂದಾಗಿ ಇಬ್ಬರು ಮೃತಪಟ್ಟಿದ್ದು, ಹಲವರು ಅಸ್ವಸ್ಥಗೊಂಡಿದ್ದಾರೆ. ಆಸ್ಪತ್ರೆಗೆ ದಾಖಲಾದ ಹಲವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.