Wednesday, August 17, 2022

Latest Posts

ರೋಗಿಗಳಿಗೆ ಉತ್ತಮ ಸೇವೆ, ಸ್ವಚ್ಚತೆಗೆ ಮೊದಲ ಆದ್ಯತೆ: ಮಿಮ್ಸ್ ನಿರ್ದೇಶಕ ಡಾ. ಎಂ.ಆರ್. ಹರೀಶ್

ಹೊಸದಿಗಂತ ವರದಿ, ಮಂಡ್ಯ:

ರೋಗಿಗಳಿಗೆ ಉತ್ತಮ ಸೇವೆ ಕಲ್ಪಿಸುವುದು, ಮೂಲ ಭೂತ ಸೌಲಭ್ಯ ಹಾಗೂ ಸ್ವಚ್ಚತೆ ಹೆಚ್ಚಿನ ಮೊದಲ ಆದ್ಯತೆ ನೀಡಲಾಗುವುದು ಎಂದು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೂತನ ಅಧಿಕ ಪ್ರಬಾರ ನಿರ್ದೇಶಕ ಡಾ. ಎಂ.ಆರ್. ಹರೀಶ್ ತಿಳಿಸಿದರು.
ಮಿಮ್ಸ್‍ನ ನಿರ್ದೇಶಕರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ನಮ್ಮ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ದೊರೆಯಬಹುದಾದ ಎಲ್ಲ ಸೌಲಭ್ಯಗಳನ್ನೂ ರೋಗಿಗಳಿಗೆ ತಲುಪುವುದೇ ತಮ್ಮ ಪ್ರಥಮ ಆದ್ಯತೆ ಎಂದರು.

ತಾವು 2006ರಿಂದ ಮಿಮ್ಸ್‍ನಲ್ಲಿ ಕೆಲಸ ಮಾಡುತ್ತಿದ್ದು, ಇಲ್ಲಿನ ಸಿಬ್ಬಂದಿಗಳು, ವೈದ್ಯರು, ಬರುವ ರೋಗಿಗಳ ಆಗುವ ತೊಂದರೆಗಳ ಬಗ್ಗೆ ತಿಳಿದಿದ್ದೇನೆ. ಈ ಹಿಂದೆ ಕೆಲಸ ಮಾಡಿದ ಎಲ್ಲ ನಿರ್ದೇಶಕರು, ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡಿದ್ದಾರೆ. ತಾವೂ ಸಹ ಅದೇ ಹಾದಿಯಲ್ಲಿ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಮಂಡ್ಯ ವೈದ್ಯಕೀಯ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವ್ಯವಸ್ಥೆ ರೂಪಿಸಬೇಕು. ಅಧ್ಯಯನಕ್ಕೆ ಅಗತ್ಯ ಸೌಲಭ್ಯ ಕಲ್ಪಿಸುವುದು. ಗುಣಮಟ್ಟ ಹೆಚ್ಚಿಸಲು ಕ್ರಮ ವಹಿಸಲಾಗುವುದು ಎಂದರು.

ಜಾಗತ ಕೊರತೆ:
ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಜಾಗದ ಕೊರತೆ ಎದುರಾಗಿದೆ. ನಮ್ಮ ಸಂಸ್ಥೆಗೆ ಇನ್ನೂ 13 ಎಕರೆ ಜಾಗ ಬರಬೇಕಾಗಿದೆ. ಜಿಲ್ಲಾಡಳಿತ ಮತ್ತು ಸರ್ಕಾರದೊಂದಿಗೆ ವ್ಯವಹರಿಸಿ ಜಾಗದ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು. ಹೆಚ್ಚುವರಿ ಜಾಗ ಸಿಕ್ಕಲ್ಲಿ ಆಸ್ಪತ್ರೆ ಮತ್ತಷ್ಟು ಅಭಿವೃದ್ಧಿ ಸಾಧ್ಯ. ಇದರಿಂದ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ನೀಡಲು ನೆರವಾಗಲಿದೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!