ಹೊಸ ದಿಗಂತ ವರದಿ, ಉಡುಪಿ:
ಮಾಜಿ ಸಚಿವ ರೋಷನ್ ಬೇಗ್ ಬಂಧನದಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ ಇಲ್ಲ. ಇಲ್ಲಿ ಬಿಜೆಪಿ, ಕಾಂಗ್ರೆಸ್ ಅಥವಾ ಜೆಡಿಎಸ್ ಎನ್ನುವ ಪ್ರಶ್ನೆಯೇ ಬರುವುದಿಲ್ಲ ಎಂದು ಹಿಂದು ಧಾರ್ಮಿಕ ದತ್ತಿಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸೋಮವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇದು ಸಿಬಿಐ ಕಾರ್ಯಾಚರಣೆಯಾಗಿದೆ. ಅದೊಂದು ಸ್ವತಂತ್ರವಾದ ಸಂಸ್ಥೆ. ಕಾನೂನು, ಕಾಯ್ದೆ ನಿಯಮಕ್ಕೆ ಸಂಬಂಧಿಸಿದ ವಿಚಾರವಾಗಿದ್ದರಿಂದ, ರೋಷನ್ ಬೇಗ್ ಕಾನೂನು ಮೂಲಕವೇ ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಿದ್ದಾರೆ.