ಹೊಸ ದಿಗಂತ ವರದಿ, ಮಂಡ್ಯ:
ಸರ್ವೆ ಇಲಾಖೆ ಅಧೀಕ್ಷಕಿಯೊಬ್ಬರು ಲಂಚ ಪಡೆಯುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಸಿಕ್ಕಿಬಿದ್ದ ಘಟನೆ ಸೋಮವಾರ ನಡೆದಿದೆ.
ಸರ್ವೆ ಇಲಾಖೆ ಅಧೀಕ್ಷಕಿ ವಿಜಯಮ್ಮ ಎಂಬುವರೇ ಲಂಚ ಪಡೆಯುತ್ತಿದ್ದಾಗ ಸಿಕ್ಕಿ ಬಿದ್ದ ಅಧಿಕಾರಿ. ಹೊರ ಗುತ್ತಿಗೆ ಆಧಾರದಲ್ಲಿ ಡಿ ಗ್ರೂಪ್ ನೌಕರರೊಬ್ಬರ ನೇಮಕಕ್ಕೆ ಸಂಬಂಧಿಸಿದಂತೆ ಮಹದೇವಯ್ಯ ಎಂಬುವರಿಗೆ 25 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ.
ಈ ಸಂಬಂಧ ಮಹದೇವಯ್ಯ ಅವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದು, ಈ ಸಂಬಂಧ ದೂರು ದಾಖಲಿಸಿಕೊಂಡ ಎಸಿಬಿ ಪೆÇಲೀಸರು ವಿಜಯಮ್ಮ ಅವರ ಕಚೇರಿಯಲ್ಲೇ ಲಂಚ ಸ್ವೀಕರಿಸಿದ್ದ ವೇಳೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಮೈಸೂರಿನ ಎಸಿಬಿ ಡಿವೈಎಸ್ಪಿ ಎಚ್. ಪರಶುರಾಮಪ್ಪ ಹಾಗೂ ಮಂಡ್ಯ ಎಸಿಬಿ ಇನ್ಸ್ಪೆಕ್ಟರ್ ಸತೀಸ್ ಅವರು ದಾಳಿಯಲ್ಲಿ ಪಾಲ್ಗೊಂಡಿದ್ದರು. ವಿಜಯಮ್ಮ ಅವರನ್ನುಬಂಧಿಸಿರುವ ಎಸಿಬಿ ಪೆÇಲೀಸರು ಹಣವನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.