Wednesday, July 6, 2022

Latest Posts

ಲಂಡನ್ ಮೂಲದ ಕಲಾವಿದೆಯನ್ನು ವಿವಾಹವಾದ ಹಿರಿಯ ವಕೀಲ ಹರೀಶ್ ಸಾಳ್ವೆ

ಲಂಡನ್: ಭಾರತದ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದಿಸಲು ಕೇವಲ 1 ರೂ. ಶುಲ್ಕ ಪಡೆಯುವ ಮೂಲಕ ಸುದ್ದಿಯಾಗಿದ್ದ ಹಿರಿಯ ವಕೀಲ ಹರೀಶ್ ಸಾಳ್ವೆ, ಇಂದು ಲಂಡನ್ ಮೂಲದ ಕಲಾವಿದೆಯನ್ನು ವಿವಾಹವಾಗಿದ್ದಾರೆ. ಲಂಡನ್ ಮೂಲದ ಕಲಾವಿದೆ ಕ್ಯಾರೋಲಿನ್ ಬ್ರೋಸಾರ್ಡ್ ಅವರನ್ನು ಚರ್ಚ್ ನಲ್ಲಿ ಸಾಳ್ವೆ ಸರಳವಾಗಿ ಮದುವೆಯಾದರು.
ಭಾರತದ ಮಾಜಿ ಸಾಲಿಸಿಟರ್ ಜನರಲ್ ಆಗಿರುವ 65 ವರ್ಷದ ಹರೀಶ್ ಸಾಳ್ವೆ, ಜನವರಿಯಲ್ಲಿ ಇಂಗ್ಲೆಂಡ್ ಮತ್ತು ವೇಲ್ಸ್ ನ ಕ್ವೀನ್ಸ್ ಕೌನ್ಸೆಲ್ ಆಗಿ ನೇಮಕವಾಗಿದ್ದರು. ಸಾಳ್ವೆ ಅವರು ಉತ್ತರ ಲಂಡನ್ ನಲ್ಲಿ ನೆಲೆಸಿದ್ದು, ಚಿತ್ರಕಲಾ ಕಾರ್ಯಕ್ರಮವೊಂದರಲ್ಲಿ ಕ್ಯಾರೋಲಿನ್ ಅವರನ್ನು ಭೇಟಿಯಾಗಿದ್ದರು. ಸುಮಾರು ಒಂದು ವರ್ಷಗಳಿಂದ ಇಬ್ಬರೂ ಪರಿಚಿತರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss