Thursday, June 30, 2022

Latest Posts

ಲಕ್ಷಣರಹಿತ ಕೋವಿಡ್ ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಲು ಕೋವಿಡ್ ಕೇರ್ ಸೆಂಟರ್‌ ಆರಂಭ: ಜಿಲ್ಲಾಧಿಕಾರಿ

ಬೆಳಗಾವಿ: ಲಕ್ಷಣರಹಿತ ಕೋವಿಡ್ ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಲು ಅನುಕೂಲವಾಗುವಂತೆ ಜಿಲ್ಲೆಯ ಹತ್ತು ತಾಲ್ಲೂಕಿನಲ್ಲಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್‌ ಆರಂಭಿಸಲಾಗಿದೆ. ಅದೇ ರೀತಿ ಪ್ರತಿ ಆಸ್ಪತ್ರೆಯಲ್ಲಿ ಆಕ್ಸಿಜನ್ ವ್ಯವಸ್ಥೆ ಹೊಂದಿರುವ 30 ಬೆಡ್ ಕೂಡ ಸಿದ್ಧವಾಗಿಟ್ಟುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
10 ತಾಲ್ಲೂಕಿನಲ್ಲಿ ಕೋವಿಡ್ ಕೇರ ಸೆಂಟರ್ ಸ್ಥಾಪನೆ, ಲಕ್ಷಣರಹಿತ ರೋಗಿಗಳನ್ನು ಇರಿಸಲಾಗುತ್ತಿದೆ. ಬೈಲಹೊಂಗಲ, ಸವದತ್ತಿ, ರಾಮದುರ್ಗ ಮತ್ತು ಗೋಕಾಕ ನಲ್ಲಿ ಈಗಾಗಲೇ ಲಕ್ಷಣರಹಿತರಿಗೆ ಚಿಕಿತ್ಸೆ ಆರಂಭಿಸಲಾಗಿದ್ದು, ವೈದ್ಯರ ತಂಡ ನಿಯೋಜಿಸಲಾಗಿದೆ ಎಂದರು.
ಗಂಭೀರ ಪ್ರಕರಣ ಹಾಗೂ ಚಿಕಿತ್ಸೆ ಅಗತ್ಯವಿರುವ ವರಿಗೆ ಮಾತ್ರ ಬಿಮ್ಸ್ ಗೆ ದಾಖಲು ಮಾಡಲಾಗುತ್ತಿದೆ.
ಲಕ್ಷಣರಹಿತರಿಗೆ ತಾಲ್ಲೂಕು ಮಟ್ಟದಲ್ಲಿ ಹತ್ತು ದಿನಗಳ ಕಾಲ ಸರ್ಕಾರದ ಮಾರ್ಗಸೂಚಿ ಪ್ರಕಾರ ಊಟೋಪಹಾರ ಮತ್ತು ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ.
768 ಬೆಡ್ ಗಳು ಹತ್ತು ಕೋವಿಡ್ ಕೇರ್ ಸೆಂಟರ್ ನಲ್ಲಿ ಲಭ್ಯವಿವೆ. ಖುದ್ದಾಗಿ ಪರಿಶೀಲನೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಇನ್ನೂ ಹೆಚ್ಚಿನ ಬೆಡ್ ಕಲ್ಪಿಸುವ ಅವಕಾಶ ಇದೆ ಎಂದು ತಿಳಿಸಿದರು.
ಬೆಳಗಾವಿ ನಗರದ ಇ.ಎಸ್.ಐ. ಆಸ್ಪತ್ರೆಯಲ್ಲೂ 25 ಬೆಡ್ ಸಜ್ಜುಗೊಳಿಸಲಾಗಿದ್ದು, ಕೆ.ಎಲ್.ಇ ಆಸ್ಪತ್ರೆಯಲ್ಲಿ 65 ಬೆಡ್ ವ್ಯವಸ್ಥೆ ಮಾಡಲಾಗಿದೆ. ಇನ್ನೂ 30 ಬೆಡ್ ಕಲ್ಪಿಸಲು ಕೋರಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ವಿವರಿಸಿದರು.
ಜಿಲ್ಲಾ ಆಸ್ಪತ್ರೆ ಯಲ್ಲಿ ಇನ್ನೂ ನೂರು ಬೆಡ್ ಹೆಚ್ಚಳ ಮಾಡಲಾಗಿದೆ.
ಕೋವಿಡ್ ಹೊರತುಪಡಿಸಿ ಇತರೆ ರೋಗಿಗಳನ್ನು ಸರಕಾರದ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಿಗೆ ಕಳಿಸಲಾಗುವುದು. ಖಾಸಗಿ ಆಸ್ಪತ್ರೆಯವರು ಕೂಡ ಇತರೆ ರೋಗಿಗಳ ಚಿಕಿತ್ಸೆಗೆ ಮುಂದಾಗಿವೆ.
ಕೆಲ ಸಣ್ಣ ಆಸ್ಪತ್ರೆಯ ವೈದ್ಯರು ಸರ್ಕಾರಿ ಅಥವಾ ಇತರೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಆಸಕ್ತಿ ತೋರಿಸಿದ್ದಾರೆ. ಅವರ ಪಟ್ಟಿ ತಯಾರಿಸಿ ಅವರ ಸೇವೆಯನ್ನು ಬಳಸಿಕೊಳ್ಳಲಾಗುವುದು ಎಂದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಕ್ಕಾರ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss