Friday, July 1, 2022

Latest Posts

ಲವ್ ಜಿಹಾದ್ ನಲ್ಲಿ ತೊಡಗಿದರೆ ಖಂಡಿತಾ ನಾಶವಾಗುತ್ತೀರಿ: ಎಚ್ಚರಿಕೆ ನೀಡಿದ ಶಿವರಾಜ್ ಸಿಂಗ್ ಚೌಹಾಣ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಲವ್ ಜಿಹಾದ್ ಕುರಿತು ಮತ್ತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗುಡುಗಿದ್ದಾರೆ.
‘ಲವ್ ಜಿಹಾದ್​ನಂತಹ ಕೃತ್ಯಗಳನ್ನು ಮಾಡಿದರೆ ಖಂಡಿತಾ ನೀವು ನಾಶವಾಗುತ್ತೀರಿ’ ಎಂದು ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಸೆಹೋರ್ ಜಿಲ್ಲೆಯಲ್ಲಿ ಯೋಜನೆಯೊಂದರ ಉದ್ಘಾಟನೆ ವೇಳೆ ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ತರುತ್ತಿರುವ ವಿಚಾರದ ಕುರಿತು ಮಾತನಾಡಿದ ಅವರು, ನಮ್ಮ ಹೆಣ್ಣು ಮಕ್ಕಳೊಡನೆ ಅಸಹ್ಯವಾಗಿ ವರ್ತಿಸುವುದನ್ನು ನಾನು ಸಹಿಸುವುದಿಲ್ಲ ಅಂಥವರನ್ನು ನಾನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಸರ್ಕಾರವು ಎಲ್ಲರಿಗೂ ಸಮಾನ. ಎಲ್ಲಾ ಜಾತಿಯವರಗೂ, ಎಲ್ಲ ಧರ್ಮದವರಿಗೂ ಸೇರಿದ್ದು, ಬಲವಂತದ ಮತಾಂತರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಇಲ್ಲಿ ಯಾವುದೇ ತಾರತಮ್ಯ ಇರುವುದಿಲ್ಲ ಎಂದು ಶಿವರಾಜ್ ಸಿಂಗ್ ಚೌಹಾಣ್ ಸ್ಪಷ್ಟಪಡಿಸಿದ್ದಾರೆ.
ಸದ್ಯ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಬಲವಂತದ ಮತಾಂತರವನ್ನು ತಡೆಯುವ ಸಲುವಾಗಿ ಸುಗ್ರೀವಾಜ್ಞೆ ಹೊರಡಿಸಿದ್ದು, ಅಂತಧರ್ಮೀಯ ವಿವಾಹಕ್ಕೆ ಕೆಲವು ಷರತ್ತುಗಳನ್ನು ವಿಧಿಸಿದ್ದು, ಶಿಕ್ಷೆಯ ಪ್ರಮಾಣವನ್ನು ಕೂಡಾ ಪ್ರಕಟಿಸಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss