ಹೊಸದಿಗಂತ ಆನ್ಲೈನ್ ಡೆಸ್ಕ್:
ಭಾರತೀಯರಿಗೆ ಪ್ರಧಾನಿ ಮೋದಿ ಗುಡ್ ನ್ಯೂಸ್ ನೀಡಿದ್ದು, ಇನ್ನು ಕೆಲವೇ ವಾರಗಳಲ್ಲಿ ಭಾರತಕ್ಕೆ ಕೊರೋನಾ ಲಸಿಕೆ ಬರಲಿದೆ ಎಂದು ಸರ್ವ ಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಈಗಾಗಲೇ ರಾಜ್ಯಗಳ ಜೊತೆ ಮಾತುಕತೆ ನಡೆಸುತ್ತಿದ್ದು, ಸಾರ್ವಜನಿಕ ಆರೋಗ್ಯಕ್ಕೆ ಮೊದಲ ಆದ್ಯತೆಯಾಗಿ ಇಟ್ಟುಕೊಂಡು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ವಿಜ್ಞಾನಿಗಳು ಇನ್ನು ಕೆಲವು ವಾರಗಳಲ್ಲಿ ಲಸಿಕೆ ಸಿದ್ಧಪಡಿಸುತಿದ್ದು, ವಿಜ್ಞಾನಿಗಳು ಗ್ರೀನ್ ಸಿಗ್ನಲ್ ನೀಡಿದ ತಕ್ಷಣ ದೇಶದಲ್ಲಿ ವ್ಯಾಕ್ಸಿನೇಷನ್ ಪ್ರಾರಂಭವಾಗುತ್ತದೆ ಎಂದು ಭರವಸೆ ನೀಡಿದರು.
ದೇಶದಲ್ಲಿ ಕೊರೋನಾ ಲಸಿಕೆ ವಿತರಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಂಡಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ. ಲಸಿಕೆ ವಿತರಣೆಯಲ್ಲಿ ಪರಿಣತಿ ಮತ್ತು ಸಾಮರ್ಥ್ಯವನ್ನು ಭಾರತ ಹೊಂದಿದೆ ಎಂದರು.
ಭಾರತದಲ್ಲಿ ಕೊರೋನಾ ಲಸಿಕೆಯ ಶುಲ್ಕವು ನಿಯಮಿತವಾಗಿರುತ್ತದೆ ಎಂದು ತಿಳಿಸಿದರು.