ಹೊಸದಿಲ್ಲಿ: ಕೊರೋನಾ ಸೋಂಕನ್ನು ತಡೆಯಲು ವಿಧಿಸಿರುವ ಲಾಕ್ ಡೌನ್ ನಿಯಮವನ್ನು ರಾಜ್ಯ ಸರ್ಕಾರಗಳು ಪಾಲಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದ್ದು, ಯಾರಾದರೂ ನಿಯಮಗಳನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದೆ.
ಕರ್ನಾಟಕದ 9 ಜಿಲ್ಲೆಗಳು ಸೇರಿದಂತೆ ದೇಶದ 75 ಜಿಲ್ಲೆಗಳನ್ನು ಲಾಕ್ ಡೌನ್ ಮಾಡಲಾಗಿದೆ. ದೇಶದಲ್ಲಿ ಈವರೆಗೂ 8 ಸಾವು ಸಂಭವಿಸಿದ್ದು, 400ಕ್ಕೂ ಹೆಚ್ಚು ಮಂದಿಗೆ ಸೋಂಕು ದೃಢಪಟ್ಟಿದೆ. ಹೀಗಾಗಿ ಮಾ.31ರವರೆಗೆ ಅಗತ್ಯ ಸೇವೆಗಳು ಮಾತ್ರವೇ ಕಾರ್ಯನಿರ್ವಹಿಸುತ್ತದೆ.
ಕೆಲವು ಜನ ಲಾಕ್ ಡೌನ್ ನನ್ನು ಗಂಭೀರವಾಗಿ ಪರಿಗಣಿಸಿಲ್ಲ, ದಯವಿಟ್ಟು ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ, ನಿಮ್ಮ ಕುಟುಂಬದವರನ್ನು ರಕ್ಷಿಸಿ, ನಿಯಮ ಮತ್ತು ಸಲಹೆಗಳನ್ನು ಗಂಭೀರವಾಗಿ ಪಾಲಿಸಿ. ರಾಜ್ಯ ಸರ್ಕಾರಗಳು ನಿಯಮಗಳನ್ನು ಮತ್ತು ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಾನು ವಿನಂತಿಸುತ್ತೇನೆ. ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದರು.