Thursday, July 7, 2022

Latest Posts

ಲಾಕ್ ಡೌನ್ ವಿಸ್ತರಣೆ ಕುರಿತು ನಾಳೆ ತುರ್ತು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಬಿ.ಎಸ್. ವೈ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಾಕ್ ಡೌನ್ ಹಿನ್ನಲೆ ನಾಳೆ ತುರ್ತು ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ ಬಿ.ಸ್. ಯಡಿಯೂರಪ್ಪ ಕರೆದಿದ್ದಾರೆ.

ರಾಜ್ಯದಲ್ಲಿನ ಲಾಕ್ ಡೌನ್ ವಿಸ್ತರಣೆ ಕುರಿತು ಚರ್ಚಿಸಲು ನಾಳೆ ಬೆಳಗ್ಗೆ 11 ಗಂಟೆಗೆ ತುರ್ತು ಸಭೆ ಕರೆದಿದ್ದಾರೆ. ಜಿಲ್ಲೆಗಳಲ್ಲಿ ಕೊರೋನಾ ಹಾಗೂ ಲಾಕ್ ಡೌನ್ ನಿಂದ ಆಗಿರುವ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿ ಚರ್ಚಿಸಲಿದ್ದಾರೆ.

ದೇಶದ ವಿವಿಧ ಪಕ್ಷಗಳ ನಾಯಕರ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ಏ.14ರಂದೇ ದೇಶದಲ್ಲಿ ಲಾಕ್ ಡೌನ್ ತೆರವು ಮಾಡಲು ಸಾಧ್ಯವಿಲ್ಲ ಎಂದರು. ಕಳೆದ ವಾರ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ ದೇಶದಲ್ಲಿನ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದಿದ್ದಾರೆ.

ಈಗಾಗಲೇ ಉತ್ತರ ಪ್ರದೇಶದ 15ಜಿಲ್ಲೆಗಳನ್ನು ಸಂಪೂರ್ಣ ಲಾಕ್ ಡೌನ್ ಮಾಡಿದ್ದು, ಕರ್ನಾಟಕದಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಬಹುದೆಂದು ತಿಳಿಯಬೇಕಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss