ಹೊಸದಿಗಂತ ಆನ್ಲೈನ್ ಡೆಸ್ಕ್:
ತೆಲಂಗಾಣದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ.
ತೆಲಂಗಾಣದ ನಲಗೊಂಡ ಜಿಲ್ಲೆಯಲ್ಲಿ ಲಾರಿ ಆಟೋ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ.
ಈ ಬಗ್ಗೆ ನಲಗೊಂಡ ಎಸ್.ಪಿ ರಂಗನಾಥ್ ಮಾಹಿತಿ ನೀಡಿದ್ದು, 20 ಕೃಷಿ ಕಾರ್ಮಿಕರು ಆಟೋದಲ್ಲಿ ಹೋಗುತ್ತಿದ್ದರು. ಅವರು ಕೆಲಸ ಮುಗಿಸಿ ದೇವರಕೊಂಡದಿಂದ ಮನೆಗೆ ವಾಪಸ್ ಹೋಗುವಾಗ ಘಟನೆ ಸಂಭವಿಸಿದೆ ಎಂದಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.