ಹೊಸ ದಿಗಂತ ವರದಿ, ಮಡಿಕೇರಿ:
ಬಿಯರ್ ತುಂಬಿದ ಲಾರಿಯೊಂದು ಪಲ್ಟಿಯಾದ ಘಟನೆ ಅರಂತೋಡಿನ ಕೊಡೆಂಕೇರಿ ತಿರುವಿನಲ್ಲಿ ನಡೆದಿದೆ.
ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಯಲ್ಲಿ ಮಗುಚಿಕೊಂಡಿದೆ. ಅದೃಷ್ಟವಶಾತ್ ಚಾಲಕ ಹಾಗೂ ನಿರ್ವಾಹಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಸಾಕಷ್ಟು ಬಿಯರ್ ಬಾಟಲಿಗಳಿಗೆ ಹಾನಿಯಾಗಿದ್ದು, ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.