Thursday, February 25, 2021

Latest Posts

ಲಾಲೂ ಆರೋಗ್ಯ ಸ್ಥಿತಿ ಇನ್ನಷ್ಟು ಉಲ್ಬಣ: ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್ ಗೆ ಶಿಫ್ಟ್?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಆರ್‌ಜೆಡಿ ಅಧ್ಯಕ್ಷ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ದೆಹಲಿಯ ಏಮ್ಸ್​ ಆಸ್ಪತ್ರೆಗೆ ಸ್ಥಳಾಂತರಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಲಾಲೂ ಪ್ರಸಾದ ಯಾದವ್ ಆರೋಗ್ಯದ ಕುರಿತು ಅವರ ಮಗ ತೇಜಸ್ವಿ ಯಾದವ್​ ಮಾಹಿತಿ ನೀಡಿದ್ದು, ಅಪ್ಪನ ಆರೋಗ್ಯ ಗಂಭೀರವಾಗಿದೆ. ಮುಖವೆಲ್ಲ ಊದಿದೆ. ಅವರ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿದೆ. ಇಂದು ಅಥವಾ ನಾಳೆ ದೆಹಲಿಯ ಏಮ್ಸ್​ ಆಸ್ಪತ್ರೆಗೆ ಸ್ಥಳಾಂತರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು. ವೈದ್ಯರ ಬಳಿ ಈ ಬಗ್ಗೆ ಮೊದಲು ಚರ್ಚಿಸಿ ನಂತರ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುತ್ತೇವೆ. ಅದಕ್ಕೂ ಮೊದಲು ನ್ಯಾಯಾಲಯದ ಅನುಮತಿ ಪಡೆಯಬೇಕಿದೆ ಎಂದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!