ಮುಂಬೈ: ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ಗೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.
ಲೈಂಗಿಕ ಹಲ್ಲೆ ಹಾಗೂ ಅತ್ಯಾಚಾರ ನಡೆಸಿದ್ದಾರೆ ಎಂದು ನಟಿ ಪಾಯಲ್ ಘೋಷ್ ದೂರು ನೀಡಿದ್ದು,ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.
ನಾಳೆ ಬೆಳಗ್ಗೆ11 ಗಂಟೆಗೆ ವರ್ಸೋವಾ ಪೊಲೀಸ್ ಠಾಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ. ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಹೇಳಿದ್ದರು.