Thursday, July 7, 2022

Latest Posts

ಲೋಕಸಭಾ ಸದಸ್ಯ ಮನೀಷ್ ತಿವಾರಿಗೆ ಕೊರೋನಾ ಪಾಸಿಟಿವ್

ಹೊಸ ದಿಗಂತ ಆನ್‌ಲೈನ್ ಡೆಸ್ಕ್:

ಕಾಂಗ್ರೆಸ್ಸಿನ ಲೋಕಸಭಾ ಸದಸ್ಯ ಮನೀಷ್ ತಿವಾರಿ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ.
ಈ ಬಗ್ಗೆ ಖುದ್ದು ಅವರೇ ತಮ್ಮ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಇಂದು ಮಧ್ಯಾಹ್ನ ನನಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ ರಾತ್ರಿ 2 ಗಂಟೆ ಸುಮಾರಿಗೆ ಅಲ್ಪ ಪ್ರಮಾಣದ ಜ್ವರ ಕಾಣಿಸಿಕೊಂಡಿತ್ತು. ಬೆಳಗ್ಗೆ ಸ್ವಯಂಪ್ರೇರಿತನಾಗಿ ಕೊರೊನಾವೈರಸ್ ತಪಾಸಣೆ ಮಾಡಿಸಿಕೊಂಡಾಗ ಸೋಂಕು ಇರುವುದು ಪತ್ತೆಯಾಗಿದೆ. ಎರಡು ಸಾಮಾನ್ಯ ಪರೀಕ್ಷೆಗಳಲ್ಲಿ ಕೊವಿಡ್-19 ಸೋಂಕಿನ ಬಗ್ಗೆ ಗೊತ್ತಾಗಿದ್ದು, ಯಾವುದೇ ಬೇರೆ ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲ ಕಾರ್ಯಕರ್ತರು ಮತ್ತು ಸಂಪರ್ಕಿತರು ಮುನ್ನೆಚ್ಚರಿಕೆ ಕ್ರಮವಾಗಿ ಸೋಂಕಿನ ತಪಾಸಣೆ ಮಾಡಿಸಿಕೊಳ್ಳಿ ಎಂದೂ ಅವರು ಮನವಿ ಮಾಡಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss