ಹೊಸದಿಲ್ಲಿ: ಸಂಸತ್ತು ಮುಂಗಾರು ಅಧಿವೇಶನದಲ್ಲಿ ರಾಷ್ಟ್ರೀಯ ಹೋಮಿಯೊಪಥಿ ಆಯೋಗ ಮಸೂದೆ ಮತ್ತು ಭಾರತೀಯ ವೈದ್ಯ ಪದ್ಧತಿಯ ರಾಷ್ಟ್ರೀಯ ಆಯೋಗ ಮಸೂದೆಗಳಿಗೆ ಲೋಕಸಭೆ ಸೋಮವಾರ ಅನುಮೋದನೆ ನೀಡಿತು.
ದೇಶದಲ್ಲಿ ಕೈಗೆಟುಕುವ ದರದಲ್ಲಿ ಮತ್ತು ಉತ್ತಮ ಗುಣಮಟ್ಟದಲ್ಲಿ ವೈದ್ಯಕೀಯ ಶಿಕ್ಷಣ ಕಲ್ಪಿಸಲು ಮತ್ತು ಹೋಮಿಯೊಪಥಿ, ಭಾರತೀಯ ವೈದ್ಯಪದ್ಧತಿಯಲ್ಲಿ ಪರಿಣತ ವೃತ್ತಿಪರರ ರೂಪಿಸುವ ಕ್ರಮಗಳಿಗೆ ಮಸೂದೆಗಳು ಒತ್ತು ನೀಡಲಿವೆ.
ಮಸೂದೆಗೆ ಆಕ್ಷೇಪ ವ್ಯಕ್ತಪಡಿಸಿದ ಕೆಲ ಸದಸ್ಯರು, ಕೇಂದ್ರ ಈ ವಿಷಯದಲ್ಲಿ ವಿಸ್ತೃತ ಚರ್ಚೆ ನಡೆಸಬೇಕು ಎಂದು ಸಲಹೆ ಮಾಡಿದರು.