ನವದೆಹಲಿ: ಕ್ಯಾಪ್ಟನ್ ಕೂಲ್ ಎಂದೇ ಪ್ರಖ್ಯಾತಿ ಪಡೆದ ಧೋನಿ ನಿನ್ನೆಯಷ್ಟೇ ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದಾರೆ. ಇತ್ತ ಭಾನುವಾರ ಬೆಳಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ, 2024ರ ಲೋಕಸಭೆ ಚುನಾವಣೆಯಲ್ಲಿ ಮಹೇಂದ್ರ ಸಿಂಗ್ ಧೋನಿ ಸ್ಪರ್ಧಿಸಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.
‘ಎಂ.ಎಸ್. ಧೋನಿ ಕ್ರಿಕೆಟ್ನಿಂದ ನಿವೃತ್ತರಾಗುತ್ತಿದ್ದಾರೆ ಹೊರತು ಬೇರೆ ಯಾವುದರಿಂದಲೂ ಅಲ್ಲ. ಅವರ ಪ್ರತಿಭೆ ಸಮಸ್ಯೆಗಳ ವಿರುದ್ಧ ಹೋರಾಡಲು ನೆರವಾಗಬೇಕು. ಕ್ರಿಕೆಟ್ನಲ್ಲಿ ಅವರು ಪ್ರದರ್ಶಿಸಿದ ಸ್ಫೂರ್ತಿದಾಯಕ ನಾಯಕತ್ವ ಸಾರ್ವಜನಿಕ ಜೀವನಕ್ಕೆ ಅಗತ್ಯವಿದೆ. ಅವರು 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕು’ ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.