Friday, July 1, 2022

Latest Posts

ವಂಚನೆ ಪ್ರಕರಣ: ನಟಿ ಸನ್ನಿ ಲಿಯೋನ್ ಬಂಧನಕ್ಕೆ ಕೇರಳ ಹೈಕೋರ್ಟ್ ತಡೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

29 ಲಕ್ಷ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ಬಂಧನಕ್ಕೆ ಕೇರಳ ಹೈಕೋರ್ಟ್ ತಡೆ ನೀಡಿದೆ.
ನ್ಯಾಯಮೂರ್ತಿ ಅಶೋಕ್ ಮೆನನ್ ನೇತೃತ್ವದ ನ್ಯಾಯಪೀಠವು ಜಾಮೀನು ಅರ್ಜಿ ವಿಚಾರಣೆ ನಡೆಸಿ ಈ ಮಧ್ಯಂತರ ಆದೇಶ ನೀಡಿದೆ.
ಇದೇ ವೇಳೆ, ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಲು ಪೊಲೀಸರಿಗೆ ಅನುಮತಿ ನೀಡಿದ್ದು, ಆದರೆ, ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್​​ಪಿಸಿ)41 ಎ ಅಡಿ ನೋಟಿಸ್ ನೀಡಿದ ಬಳಿಕವೇ ವಿಚಾರಣೆ ನಡೆಸುವಂತೆ ಸೂಚಿಸಿದೆ.
ಪೆರುಂಬವೂರ್ ಮೂಲದ ಆರ್ ಶಿಯಾಸ್ ಎಂಬುವವರು ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಭರವಸೆ ನೀಡಿ ಸನ್ನಿ ಲಿಯೋನ್ 29 ಲಕ್ಷ ರೂ. ಸ್ವೀಕರಿಸಿ ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸನ್ನಿ ಲಿಯೋನ್​ ಜಾಮೀನಿಗಾಗಿ ಕೋರ್ಟ್​ ಮೊರೆ ಹೋಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss