Wednesday, June 29, 2022

Latest Posts

ವನಿತಾ ಟಿ20 ವಿಶ್ವಕಪ್: ಭರ್ಜರಿ ಗೆಲುವಿನೊಂದಿಗೆ ಭಾರತ ಶುಭಾರಂಭ!

ಸಿಡ್ನಿ: ವನಿತಾ ಟಿ20 ವಿಶ್ವಕಪ್‌ನ ಆರಂಭಿಕ ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸುವ ಮೂಲಕ ಕೂಟದಲ್ಲಿ ಭಾರತ ಶುಭಾರಂಭ ಮಾಡಿದೆ.
ಆರಂಭಿಕ ಪಂದ್ಯದಲ್ಲಿ ಹರ್ಮನ್ ಕೌರ್ ಬಳಗ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾಗೆ ಸೋಲಿನ ರುಚಿ ತೋರಿಸಿದೆ.
ಸಿಡ್ನಿ ಅಂಗಳದಲ್ಲಿ ಟಾಸ್ ಗೆದ್ದ ಆಸೀಸ್ ವನಿತೆಯರು ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದರು. ಭಾರತ ನಿಗದಿತ 20 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿದರೆ, ಭಾರತದ ಬಾಲಿಂಗ್ ದಾಳಿಗೆ ತತ್ತರಿಸಿದ ಆಸೀಸ್ ಇನ್ನೂ ಒಂದು ಎಸೆತ ಬಾಕಿ ಇರುವಾಗ 115 ರನ್ ಗೆ ಆಲ್ ಔಟ್ ಆಗಿದೆ.
ಭಾರತದ ಪರ ಪೂನಂ ಯಾದವ್ ನಾಲ್ಕು ವಿಕೆಟ್ ಕಬಳಿಸಿದರೆ, ಶಿಖಾ ಪಾಂಡೆ ಮೂರು ವಿಕೆಟ್ ಪಡೆದರು. ಭಾರತ 17 ರನ್ ಅಂತರದಿಂದ ಜಯ ಸಾಧಿಸಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss