Saturday, August 13, 2022

Latest Posts

ವರದಕ್ಷಿಣೆ ಕಿರುಕುಳ ನೀಡಿ ಹೆಂಡತಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮೈಸೂರು: ವರದಕ್ಷಿಣೆ ಕಿರುಕುಳ ನೀಡಿ ಹೆಂಡತಿಯನ್ನು ಕೊಲೆ ಮಾಡಿದ್ದ ಪತಿಗೆ ಮೈಸೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದ ಶಿವಣ್ಣ ಎಂಬಾತನೇ ಶಿಕ್ಷೆಗೆ ಗುರಿಯಾದ ವ್ಯಕ್ತಿ.
ಪ್ರಕರಣದ ಹಿನ್ನಲೆ : ೨೦೧೨ರಲ್ಲಿ ಉದ್ಬೂರು ಗ್ರಾಮದ ಅಂಕನಾಯಕ ಪುತ್ರಿ ದೇವಿ ಮತ್ತು ಶಿವಣ್ಣ ನಡುವೆ ವಿವಾಹ ನಡೆದಿತ್ತು. ಮದುವೆ ವೇಳೆ ವರದಕ್ಷಿಣೆಯಾಗಿ ೫೦ಸಾವಿರ ರೂ. ಹಣ ಕೊಟ್ಟಿದ್ದರು. ಎರಡು ವರ್ಷ ಪತ್ನಿಯನ್ನು ಚೆನ್ನಾಗಿ ನೋಡಿಕೊಂಡ ಶಿವಣ್ಣ, ಆನಂತರ ಹೆಚ್ಚಿನ ವರದಕ್ಷಿಣೆ ತರುವಂತೆ ಮಾನಸಿಕವಾಗಿ, ದೈಹಿಕವಾಗಿ ಹೆಂಡತಿಗೆ ಹಿಂಸೆ ನೀಡುತ್ತಿದ್ದ. ಹಲವಾರು ಬಾರಿ ನ್ಯಾಯ ಪಂಚಾಯಿತಿ ಮಾಡಿದ್ದರೂ ಪ್ರಯೋಜನವಾಗಲಿಲ್ಲ.
೨೦೧೬ರ ಮಾ.೨೭ರ ತಡರಾತ್ರಿ ದೇವಿಯನ್ನು ಶಿವಣ್ಣ ಕೊಲೆ ಮಾಡಿ, ಶವವನ್ನು ಗೋಣಿ ಚೀಲದಲ್ಲಿ ಸುತ್ತಿ ಬೈಕ್‌ನಲ್ಲಿ ತೆಗೆದುಕೊಂಡು ಹೋಗಿ ಪೊದೆಯಲ್ಲಿ ಎಸೆದಿದ್ದ. ೨೦೧೬ರ ಏ.೨೨ ರಂದು ಬಿಳಿಗೆರೆ ಸೋನಹಳ್ಳಿ ಬಳಿಯ ಪೊದೆಯಲ್ಲಿ ದೇವಿಯ ಸೀರೆ, ತಲೆ ಬುರುಡೆ, ಕಾಲು ಚೈನು ಪತ್ತೆಯಾಗಿತ್ತು. ಈ ಸಂಬAಧ ಬದನವಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಅಂದಿನ ನಂಜನಗೂಡು ಉಪ ವಿಭಾಗದ ಎಎಸ್ಪಿ ದಿವ್ಯಾ ಸಾರಾ ಥಾಮಸ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನ್ಯಾಯಾಧೀಶ ಕೆ. ದೊಡ್ಡೇಗೌಡ ಅವರು, ಶಿವಣ್ಣ ಮೇಲಿನ ಆರೋಪ ಸಾಬೀತಾಗಿದೆ ಎಂದು ಜೀವಾವಧಿ ಶಿಕ್ಷೆ ಹಾಗೂ ೧೮ ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ನಾಗಪ್ಪ ಸಿ. ನಾಕ್ಮನ್ ವಾದ ಮಂಡಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss