ಹೊಸ ದಿಗಂತ ವರದಿ, ಮಳವಳ್ಳಿ :
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬೆಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಾಲ್ಲೂಕಿನ ಬೆಳಕವಾಡಿ ಗ್ರಾಮದ ಗೃಹಿಣಿ ರಶ್ಮಿ (28) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.
ರಶ್ಮಿ ಕಳೆದ 2 ವರ್ಷಗಳ ಹಿಂದೆ ಕಿರಣಕುಮಾರ್ ಎಂಬುವರ ಜೊತೆ ವಿವಾಹವಾಗಿದ್ದರು. ರಶ್ಮಿಗೆ ವರದಕ್ಷಿಣೆ ತರುವಂತೆ ಗಂಡ ಕಿರಣಕುಮಾರ್, ಅತ್ತೆ ಕಮಲಮ್ಮ, ಮಾವ ಮಹಾದೇವ ಶಟ್ಟಿ, ರಾಘವೇಂದ್ರ ಹಾಗೂ ಚಂದ್ರಶೇಖರ್ ಅವರು ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಶ್ಮಿ ತಂದೆ ವೆಂಕಟೇಶ್ ದೂರಿನಲ್ಲಿ ತಿಳಿಸಿದ್ದಾರೆ. ಶವವನ್ನು ಮರಣೋತ್ತರಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.ಇದೇ ಮೃತ ಮಹಿಳೆಯ ಸಂಬಂಧಿಕರು ಗಂಡ ಮನೆಯವರ ಹಲ್ಲೆ ನಡೆಸಿದರು. ಪರಿಸ್ಥಿತಿ ಗಂಭೀರತೆ ಅರಿತ ಡಿವೈಎಸ್ಪಿ ಎಂ.ಜೆ.ಪೃಥ್ವಿ ಸ್ಥಳಕ್ಕೆ ಭೇಟಿ ನೀಡಿ ಡಿವೈಎಸ್ಪಿ ಪೃಥ್ವಿ ಹಾಗೂ ಪಿಎಸ್ಐ ಮಹೇಶ್ ಪರಿಸ್ಥಿತಿ ತಿಳಿಗೊಳಿಸಿದರು. ಈ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.