spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಬೇಸರ: ಈ ವರ್ಷವೂ ವರ್ಗಾವಣೆ ಇಲ್ಲ

- Advertisement -Nitte

ಬೆಂಗಳೂರು: ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಕ್ ನೀಡಿದ್ದು, ಈ ವರ್ಷವೂ ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ನಡೆಯುವುದಿಲ್ಲ ಎನ್ನಲಾಗಿದೆ.
ಕೊರೊನಾ ವೈರಸ್ ಭೀತಿಯಿಂದ 2020-21 ನೇ ಸಾಲಿಗೆ ಅನ್ವಯವಾಗುವಂತೆ ವರ್ಗಾವಣೆ ಪ್ರಸ್ತಾವವನ್ನೇ ಸಾರ್ವಜನಿಕ ಶಿಕ್ಷಣ ಇಲಾಖೆ ಕೈಬಿಟ್ಟಿದೆ. ವಿಶೇಷ ಪ್ರಕರಣ ಅಥವಾ ತುರ್ತು ಅಗತ್ಯದ ಪ್ರಕರಣವಿದ್ದಲ್ಲಿ ಸರ್ಕಾರದ ಅನುಮತಿ ಪಡೆದು ವರ್ಗಾವಣೆ ನಡೆಸಲು ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ. ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆಗಾಗಿ ಹೊಸ ಕಾಯ್ದೆ ರಚನೆಯಾಗಿ ಕರಡು ನಿಯಮ ಸಿದ್ಧವಾಗಿದೆ. ಆದರೆ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಈವರ್ಷವೂ ವರ್ಗಾವಣೆ ನಡೆಯುವುದಿಲ್ಲ ಎಂದು ಹೇಳಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss