Friday, July 1, 2022

Latest Posts

ವರ್ಷದ ಅಂತ್ಯದೊಳಗೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಕಾರಜೋಳ ಖಡಕ್ ಸೂಚನೆ

ಹೊಸ ದಿಗಂತ ವರದಿ, ಶಿವಮೊಗ್ಗ:

ಶಿವಮೊಗ್ಗದಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಈ ವರ್ಷದ ಅಂತ್ಯದೊಳಗೆ ಮುಕ್ತಾಯ ಮಾಡಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಕಾರಜೋಳ ಅಧಿಕಾರಗಳಿಗೆ ಸೂಚನೆ ನೀಡಿದ್ದಾರೆ.
ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಅವರು, ವಿಮಾನ ನಿಲ್ದಾಣ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಹತ್ವದ ಕನಸು. ಆದಷ್ಟು ಬೇಗ ಕಾಮಗಾರಿ ಮುಗಿದು ಯಡಿಯೂರಪ್ಪ ಅವರು ವಿಮಾನದಲ್ಲಿಯೇ ಶಿವಮೊಗ್ಗ ಬಂದು ಹೋಗುವಂತಾಗಬೇಕು ಎಂದರು.
ವಿಮಾನ ನಿಲ್ದಾಣ ಕಾಮಗಾರಿಗೆ ಯಾವುದೇ ಅಡಚಣೆ ಇಲ್ಲ. ಹಣಕಾಸಿನ ಸಮಸ್ಯೆ ಇಲ್ಲ. ಬೇಗ ಕಾಮಗಾರಿ ಮುಗಿಸಬೇಕು ಎಂದು ಸೂಚಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss