Saturday, August 13, 2022

Latest Posts

ವರ್ಷಾಂತ್ಯದಲ್ಲಿ ಹೊಸ ಮಾರ್ಗ ಸೂಚಿ ಅನ್ವಯ ಗ್ರಾಪಂ ಚುನಾವಣೆ ನಡೆಯುವ ಸಾಧ್ಯತೆ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ವರ್ಷಾಂತ್ಯಕ್ಕೆ ಗ್ರಾಮಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ. ಚುನಾವಣಾ ಆಯೋಗ ಚುನಾವಣೆಗೆ ಹೊಸ ಮಾರ್ಗ ಸೂಚಿ ಬಿಡುಗಡೆ ಮಾಡಲಾಗಿದ್ದು ಅದರ ಅನ್ವಯ ಚುನಾವಣೆ ನಡೆಯಲಿದೆ.

ಗ್ರಾಮ ಪಂಚಾಯತ್‌ಗಳ ಅವಧಿ ಜೂನ್ ಮತ್ತು ಜುಲೈ ತಿಂಗಳಿನಲ್ಲಿಯೇ ಮುಗಿದಿದ್ದು, ಕೊರೋನಾ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ಚುನಾವಣೆಯನ್ನು ಮೇ ತಿಂಗಳಿಗೆ ಮುಂದೂಡಿತ್ತು.

ಈ ಬಗ್ಗೆ ರಾಜ್ಯ ಚುನಾವಣಾ ಆಯುಕ್ತ ಬಿ. ಬಸವರಾಜು ಮಾತನಾಡಿ, ಸುರಕ್ಷತಾ ಕ್ರಮದೊಂದಿಗೆ ಮತದಾನಡೆಸಬೇಕು. ಹಣದ ಅಗತ್ಯವಿದೆ. ಪ್ರತಿ ಮತಗಟ್ಟೆಗೂ ಇಂತಿಷ್ಟೆ ಎಂದು ಮತದಾರರ ನಿರ್ಬಂಧ ವಿಧಿಸಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಬೇಕಾಗಿದೆ. ವರ್ಷಾಂತ್ಯಕ್ಕೆ ಚುನಾವಣೆ ನಡೆಯುವ ಭರವಸೆ ಇರುವುದಾಗಿ ಅವರು ತಿಳಿಸಿದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss