Saturday, July 2, 2022

Latest Posts

ವಲಸೆ ಕಾರ್ಮಿಕರಿಗೆ ಉದ್ಯೋಗಾವಕಾಶ| ಆತ್ಮ ನಿರ್ಭಾರ್ ಯುಪಿ ರೋಜ್ಘಾರ್ ಯೋಜನೆಗೆ ಇಂದು ಪ್ರಧಾನಿ ಮೋದಿ ಚಾಲನೆ

ಹೊಸದಿಲ್ಲಿ: ದೇಶದ್ಯಂತ ಕೊರೋನಾ ಸೋಂಕಿನ ಸಂಕಷ್ಟದ ವೇಳೆಯಲ್ಲಿ ಉದ್ಯೋಗ ಕಳೆದುಕೊಂಡಿರುವ ಉತ್ತರ ಪ್ರದೇಶದ ವಲಸೆ ಕಾರ್ಮಿಕರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಆತ್ಮ ನಿರ್ಭಾರ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಆತ್ಮ ನಿರ್ಭರ್ ಉತ್ತರ ಪ್ರದೇಶ ರೋಜ್ಘಾರ್ ಅಭಿಯಾನವನ್ನು ಮೋದಿ ಪ್ರಾರಂಭಿಸಲಿದ್ದು, ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಉತ್ತರ ಪ್ರದೇಶದ ಆರು ಜಿಲ್ಲೆಗಳ ಗ್ರಾಮಸ್ಥರೊಂದಿಗೆ ಸಂವಾದ ನಡೆಸಲಿದ್ದಾರೆ.

ಜೂನ್ 20 ರಂದು ಪ್ರಧಾನಿ ಮೋದಿ ಗರಿಬ್ ಕಲ್ಯಾಣ್ ರೋಜ್ಘಾರ್ ಅಭಿಯಾನೆಯನ್ನು ದೇಶದ ಆರು ರಾಜ್ಯಗಳ 116 ಜಿಲ್ಲೆಗಳಿಗೆ ಪ್ರಾರಂಭಿಸಿದರು. ಸಾಮಾನ್ಯ ಸೇವಾ ಕೇಂದ್ರಗಳು ಮತ್ತು ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ ರಾಜ್ಯದ ಎಲ್ಲಾ ಜಿಲ್ಲೆಗಳ ಗ್ರಾಮಗಳು ಈ ಕಾರ್ಯಕ್ರಮಕ್ಕೆ ಸೇರಲಿವೆ.

ಉತ್ತರ ಪ್ರದೇಶದ ಗರೀಬ್ ಕಲ್ಯಾಣ್ ಯೋಜನೆಗೆ ಇತ್ತೀಚಿನ ದಿನಗಳಲ್ಲಿ 30 ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರ ಆಗಮಿಸಿದ್ದು, ಅವರಿಗೆ ಉದ್ಯೋಗ ಒದಗಿಸುವುದು, ಸ್ಥಳೀಯ ಉದ್ಯಮಶೀಲತೆಯನ್ನು ಉತ್ತೇಜಿಸುವುದು ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕೈಗಾರಿಕಾ ಸಂಘಗಳ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದೆ.

ರಾಜ್ಯದ 31 ಜಿಲ್ಲೆಗಳು ಈ ಯೋಜನೆ ಅಡಿಯಲ್ಲಿ ಬರಲಿದ್ದು, ಉದ್ಯೋಗವಕಾಶ ನೀಡಲು 25 ವಿವಿಧ ಇಲಾಖೆಗಳಿಗೆ ಕೇಂದ್ರೀಕರಿಸಲಾಗಿದೆ. 1.25 ಕೋಟಿ ಕಾರ್ಮಿಕರಿಗೆ ಕೆಲಸ ಸಿಗಲಿದ್ದು, ಇದರಲ್ಲಿ ದಿನಕ್ಕೆ 60 ಲಕ್ಷ ಕಾರ್ಮಿಕರಿಗೆ ಕೆಲಸಗಳು ದೊರಕಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss