Tuesday, June 28, 2022

Latest Posts

ವಲಸೆ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ: ಕೇಂದ್ರದಿಂದ ರಾಜ್ಯಗಳಿಗೆ ಮಾರ್ಗಸೂಚಿ

ಹೊಸದಿಲ್ಲಿ: ದೇಶದಲ್ಲಿ ಕೊರೋನಾ ಲಾಖ್ ಡೌನ್ ನಿಂದ ತಮ್ಮ ಸ್ವಗ್ರಾಮಗಳಿಗೆ ತೆರಳಿರುವ ವಲಸೆ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಒದಗಿಸುವ ಕುರಿತು ಇಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ನೂತನ ಮಾರ್ಗ ಸೂಚಿ ಬಿಡುಗಡೆ ಮಾಡಿದೆ.

ಕೇಂದ್ರ ಮಾರ್ಗ ಸೂಚಿಯ ಪ್ರಕಾರ, ವಲಸೆ ಬಂದಿರುವ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಕೇವಲ ಗುರುತು ಪತ್ರವನ್ನು ಪಡೆದು ಮಕ್ಕಳನ್ನು ಶಾಲೆಗೆ ಪ್ರವೇಶ ನೀಡಬೇಕು ಎಂದು ದೇಶದ ಎಲ್ಲಾ ರಾಜ್ಯ ಸರ್ಕಾರಗಳಿಗೆ ಮಾಹಿತಿ ರವಾನಿಸಿದೆ.

ಕೆಲವು ರಾಜ್ಯಗಳ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕುಂಟಿತವಾಗಿರಬಹುದು, ಅಥವಾ ಕೆಲವು ರಾಜ್ಯಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿರಬಹುದು ಆದರೆ ಯಾವುದೇ ಮಕ್ಕಳು ವಿದ್ಯಾಭ್ಯಾಸ ಪಡೆಯದೆ ವಂಚನೆಗೊಳಗಾಗಬಾರದು. ಆದ್ದರಿಂದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.

ರಾಜ್ಯದಿಂದ ಮಕ್ಕಳು ಮತ್ತೊಂದು ಪ್ರದೇಶಕ್ಕೆ ತೆರಳಿರುವುದರ ಮಾಹಿತಿಯನ್ನು ಪಟ್ಟಿ ಮಾಡಬೇಕು. ಈ ಪಟ್ಟಿಯನ್ನು ಪ್ರತಿ ಶಾಲೆಯೂ ವೈಯಕ್ತಿಕ ಅವರನ್ನು ಭೇಟಿಯಾಗಿ/ ವಾಟ್ಸ್ ಆಪ್/ ನೆರೆಹೊರೆಯವನ್ನು ಕೇಳಿ ಮಾಹಿತಿ ಪಡೆದು ಪಟ್ಟಿ ಮಾಡಬೇಕು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss