ವಾರದ ಭವಿಷ್ಯ (ಸೆ. 13ರಿಂದ 19ರವರೆಗೆ)
ಮೇಷ: ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಾಣಲಿದೆ. ಆದಾಯ ಉತ್ತಮವಿದ್ದು ಹಣಕಾಸಿನ ಪರಿಸ್ಥಿತಿ ತೃಪ್ತಿಕರ. ಅನಿರೀಕ್ಷಿತ ಧನಲಾಭ ಯೋಗವಿದೆ. ಅವಿವಾಹಿತರಿಗೆ ಶೀಘ್ರ ವಿವಾಹ ಸಂಬಂಧ ನಿಶ್ಚಯವಾಗಲಿದೆ. ದಾಂಪತ್ಯದಲ್ಲಿ ಸುಖ ಶಾಂತಿ ಸಮಾಧಾನದ ಕಾಲ. ಶತ್ರುಭಾದೆ ನಿವಾರಣೆಯಾಗಲಿದೆ. ಕೃಷಿ ಕಾರ್ಯಗಳಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಸೂಕ್ತ ಕಾಲ. ಹಿರಿಯರಿಂದ ಪ್ರಶಂಸೆ. ನಿಮ್ಮ ಕೆಲಸ ಕಾರ್ಯಗಳಿಗೆ ಎಲ್ಲರಿಂದ ಪ್ರೋತ್ಸಾಹ ದೊರೆಯಲಿದೆ. ಈಶ್ವರ, ದುರ್ಗಾರಾಧನೆ ಶುಭಪ್ರದ. ಶುಭದಿನ: 16, 17
ವೃಷಭ: ಆರೋಗ್ಯ ಚೆನ್ನಾಗಿರದು. ಶೀತ, ಕಫದ ತೊಂದರೆ ಕಾಡಲಿದೆ. ಮಕ್ಕಳಿಂದ ವಿರೋಧ. ಮಕ್ಕಳ ವಿಚಾರದಲ್ಲಿ ಚಿಂತೆ. ಹಣಕಾಸಿನ ಅಡಚಣೆ ಕಾಡಬಹುದು. ನಿಮ್ಮ ಪ್ರಯತ್ನ, ಪರಿಶ್ರಮಕ್ಕೆ ಸರಿಯಾದ ಆದಾಯ ಬಾರದು. ವ್ಯಾಪಾರದಲ್ಲಿ ನಷ್ಟ ಸಾಧ್ಯತೆ ಕಾರಣ ಜಾಗ್ರತೆಯಿಂದ ವ್ಯವಹರಿಸಿ. ಕೃಷಿ ಕಾರ್ಯಗಳಲ್ಲಿ ಹಿನ್ನಡೆ. ಅವಿವಾಹಿತರಿಗೆ ಶೀಘ್ರ ವಿವಾಹ ಸಂಬಂಧ ನಿಶ್ಚಯವಾಗಲಿದೆ. ದಾಂಪತ್ಯದಲ್ಲಿ ಸುಖ, ಶಾಂತಿ ಸಮಾಧಾನದ ಕಾಲ. ಈಶ್ವರ, ವಿಷ್ಣು ಆರಾಧನೆ ಶುಭಪ್ರದ. ಶುಭದಿನ: 14, 15
ಮಿಥುನ: ದೇವತಾನುಗ್ರಹ ಕಾಲ. ಆದಾಯ ಉತ್ತಮವಿದ್ದು ಹಣಕಾಸಿನ ವ್ಯವಸ್ಥೆ ಉತ್ತಮವಿರುತ್ತದೆ. ನೂತನ ಗೃಹ ನಿರ್ಮಾಣ ಕಾರ್ಯ ಶೀಘ್ರಗತಿಯಲ್ಲಿ ಸಾಗಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗವಿದೆ. ದಾಂಪತ್ಯದಲ್ಲಿ ಸುಖ, ಶಾಂತಿ ಸಮಾಧಾನದ ಕಾಲ. ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಾಣಲಿದೆ. ಕೃಷಿ ಸಂಬಂಧ ಕಾರ್ಯಗಳಲ್ಲಿ ಮುನ್ನಡೆ. ಈಶ್ವರ, ಗಣಪತಿ ಆರಾಧನೆ ಶುಭಪ್ರದ. ಶುಭದಿನ: 17, 19
ಕರ್ಕಾಟಕ: ಶತ್ರುಭಾದೆ ಕಾಡಲಿದೆ. ಹಿರಿಯರೊಂದಿಗೆ ವಿರೋಧ, ಮನಸ್ತಾಪಗಳು. ಯಾವುದೇ ಕೆಲಸಗಳಿಗೆ ಮುಂದಾದರೂ ವಿರೋಧ, ವಿಘ್ನ, ಅಡಚಣೆಗಳು ಎದುರಾಗುವವು. ರಾಜಕೀಯ/ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಜನಪರ ಕಾರ್ಯಗಳನ್ನು ಮಾಡಿ ಪ್ರಸಿದ್ಧಿ ಪಡೆಯುವಿರಿ. ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಸೂಕ್ತ ಕಾಲ. ಉನ್ನತ ವ್ಯಾಸಂಗಕ್ಕೆ ಪೂರಕ ಅನುಕೂಲತೆಗಳು ದೊರೆಯುವವು. ಅನಾವಶ್ಯಕ ಖರ್ಚುಗಳ ಮೇಲೆ ಹಿಡಿತವಿಡಿ. ವಿಷ್ಣು, ಸ್ಕಂದ ಆರಾಧನೆ ಶುಭಪ್ರದ. ಶುಭದಿನ: 14, 18
ಸಿಂಹ: ದೇವತಾನುಗ್ರಹ ಕಾಲ. ಕೆಲಸಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುವಿರಿ. ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಕಿರಿಕಿರಿ. ಸ್ತ್ರೀಪೀಡೆ ಇರುವುದು. ಆದಾಯ ಉತ್ತಮವಿದ್ದು ಹಣಕಾಸಿನ ಸ್ಥಿತಿ ತೃಪ್ತಿಕರ. ಅನಿರೀಕ್ಷಿತ ಧನಲಾಭ ಯೋಗವಿದೆ. ಕೃಷಿ ಕಾರ್ಯಗಳಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಸೂಕ್ತ ಕಾಲ. ಉನ್ನತ ವ್ಯಾಸಂಗಕ್ಕೂ ಅನುಕೂಲತೆಗಳು ದೊರೆಯಲಿದೆ. ಆರೋಗ್ಯದಲ್ಲಿ ಸುಧಾರಣೆ ಕಾಣಲಿದೆ. ಈಶ್ವರ, ದುರ್ಗಾರಾಧನೆ ಶುಭಪ್ರದ. ಶುಭದಿನ: 13, 16
ಕನ್ಯಾ: ಆರೋಗ್ಯ ಚೆನ್ನಾಗಿರದು. ಉಷ್ಣ ಪೀಡೆ, ತಲೆನೋವು, ನರಸಂಬಂಧ ತೊಂದರೆ ಕಾಡಬಹುದು. ಆದಾಯ ಉತ್ತಮವಿದ್ದು ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಾಣಲಿದೆ. ಹೊಸ ವಾಹನ ಖರೀದಿಗೆ ಅವಕಾಶವಿದೆ. ನೂತನ ಗೃಹ ನಿರ್ಮಾಣ ಸಂಬಂಧಿ ಕಾರ್ಯಗಳು ಶೀಘ್ರ ಗತಿಯಲ್ಲಿ ಸಾಗಲಿವೆ. ಕೃಷಿ ಕಾರ್ಯಗಳಲ್ಲಿ ಮುನ್ನಡೆ. ಆ ಮಕ್ಕಳ ಆರೋಗ್ಯದ ಕಡೆ ನಿಗಾ ವಹಿಸಿ. ಈಶ್ವರ, ವಿಷ್ಣು ಆರಾಧನೆ ಶುಭಪ್ರದ. ಶುಭದಿನ: 13, 18
ತುಲಾ: ಶೀತ, ಕಫ ಭಾದೆ ಕಾಡಲಿದೆ. ನಿಮ್ಮ ಹೆಚ್ಚಿನ ಸಮಯವನ್ನು ಉದ್ಯೋಗ, ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ. ದೂರ ಪ್ರವಾಸ ಯೋಗವಿದೆ. ಆದಾಯಕ್ಕಿಂತ ಖರ್ಚಿನ ಪ್ರಮಾಣ ಹೆಚ್ಚಾಗಿ ಹಣಕಾಸಿನ ಅಡಚಣೆ ಕಾಡಲಿದೆ. ವ್ಯಾಪಾರದಲ್ಲಿ ನಷ್ಟ ಸಾಧ್ಯತೆ ಇರುವ ಕಾರಣ ಜಾಗ್ರತೆಯಿಂದ ವ್ಯವಹರಿಸಿ. ದಾಂಪತ್ಯದಲ್ಲಿ ಕಲಹ. ಅವಿವಾಹಿತರಿಗೆ ಶೀಘ್ರ ವಿವಾಹ ಸಂಬಂಧ ನಿಶ್ಚಯವಾಗಲಿದೆ. ಈಶ್ವರ, ವಿಷ್ಣು ಆರಾಧನೆ ಶುಭಪ್ರದ. ಶುಭದಿನ: 15, 16
ವೃಶ್ಚಿಕ: ದೇವತಾನುಗ್ರಹ ಕಾಲ. ಯಾವುದೇ ಕೆಲಸಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುವಿರಿ. ನಿರುದ್ಯೋಗಿಗಳಿಗೆ ಶೀಘ್ರ ಉದ್ಯೋಗಾವಕಾಶ ದೊರೆಯಲಿದೆ. ಉದ್ಯೋಗದಲ್ಲಿ ಸ್ಥಾನ ಬಡ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಸೂಕ್ತ ಕಾಲ. ಉನ್ನತ ವ್ಯಾಸಂಗಕ್ಕೆ ಪೂರಕ ಅನುಕೂಲತೆಗಳು ದೊರೆಯಲಿವೆ. ಅವಿವಾಹಿತರಿಗೆ ಶೀಘ್ರ ವಿವಾಹ ಸಂಬಂಧ ನಿಶ್ಚಯವಾಗಲಿದೆ. ಈಶ್ವರ, ಸ್ಕಂದ ಆರಾಧನೆ ಶುಭಪ್ರದ. ಶುಭದಿನ: 17, 19
ಧನು: ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಾಣಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಆಲಸ್ಯ ಕಾಡಲಿದೆ. ಮಕ್ಕಳ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ. ಕೆಲಸಗಳನ್ನು ಯಶಸ್ವೀ ರೀತಿಯಲ್ಲಿ ನಿರ್ವಹಿಸುವಿರಿ. ಉದ್ಯೋಗದಲ್ಲಿ ಸ್ಥಾನಬಡ್ತಿ ಯೋಗವಿದೆ. ಕೃಷಿ ಕಾರ್ಯಗಳಲ್ಲಿ ಮುನ್ನಡೆ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗವಿದೆ. ದಾಂಪತ್ಯದಲ್ಲಿ ಸುಖ, ಶಾಂತಿ ಸಮಾಧಾನದ ಕಾಲ. ವ್ಯಾಪಾರಿಗಳಿಗೆ ಉತ್ತಮ ಲಾಭಾಂಶ ದೊರೆಯಲಿದೆ. ಈಶ್ವರ, ವಿಷ್ಣು ಆರಾಧನೆ ಶುಭಪ್ರದ. ಶುಭದಿನ: 13, 14
ಮಕರ: ಆದಾಯ ಉತ್ತಮವಿದ್ದರೂ ಅಧಿಕ ಪ್ರಮಾಣದ ಖರ್ಚುಗಳಿಂದಾಗಿ ಹಣಕಾಸಿನ ಅಡಚಣೆ ಕಾಡಲಿದೆ. ನೂತನ ಗೃಹನಿರ್ಮಾಣ ಸಂಬಂಧಿತ ಕಾರ್ಯಗಳು ಶೀಘ್ರಗತಿಯಲ್ಲಿ ಸಾಗಲಿವೆ. ನೂತನ ವಾಹನ/ಭೂಮಿ/ಆಸ್ತಿ ಖರೀದಿಗೆ ಅವಕಾಶವಿದೆ. ವ್ಯಾಪಾರದಲ್ಲಿ ನಿರೀಕ್ಷಿಸಿದಷ್ಟು ಲಾಭ ದೊರೆಯದು. ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಆಲಸ್ಯ ಕಾಡಲಿದೆ. ದಾಂಪತ್ಯದಲ್ಲಿ ಕಲಹ. ಈಶ್ವರ, ವಿಷ್ಣು ಆರಾಧನೆ ಶುಭಪ್ರದ. ಶುಭದಿನ: 18, 19
ಕುಂಭ: ದೇವತಾನುಗ್ರಹ ಕಾಲ. ಅನಿರೀಕ್ಷಿತ ಧನಲಾಭಯೋಗವಿದೆ. ಮಕ್ಕಳ ಅಭಿವೃದ್ಧಿಯಿಂದ ಸಂತೃಪ್ತಿ. ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಸೂಕ್ತ ಕಾಲ. ಉನ್ನತ ವ್ಯಾಸಂಗಕ್ಕೆ ಪೂರಕ ಅನುಕೂಲತೆಗಳು ಲಭಿಸುವುದು. ಕೌಟುಂಬಿಕ ಕಲಹಗಳು. ಹಿರಿಯರ ಆಸ್ತಿ, ಭೂಮಿ ಸಂಬಂಧಿತ ವಾದ ವಿವಾದಗಳು ಬಂದಾವು. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗವಿದೆ. ಈಶ್ವರ, ವಿಷ್ಣು ಆರಾಧನೆ ಶುಭಪ್ರದ. ಶುಭದಿನ: 15, 16
ಮೀನ: ಆರೋಗ್ಯದಲ್ಲಿ ಉತ್ತಮ ಸುಧಾರಣೆ. ಅನಿರೀಕ್ಷಿತ ಧನಲಾಭ ಯೋಗವಿದೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಿಂದ ಉತ್ತಮ ಲಾಭ ಬರಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆ. ಉದ್ಯೋಗದಲ್ಲಿ ಸ್ಥಾನಬಡ್ತಿ ಯೋಗವಿದೆ. ಕೃಷಿ ಕಾರ್ಯಗಳಲ್ಲಿ ಮುನ್ನಡೆ. ಪಾಲುದಾರರೊಂದಿಗೆ ಭಿನ್ನಾಭಿಪ್ರಾಯಗಳು ಬಂದಾವು. ಸಂತತಿ ಶುಭಸೂಚನೆ. ಮಕ್ಕಳ ಅಭಿವೃದ್ಧಿಯಿಂದ ಸಂತೃಪ್ತಿ. ಈಶ್ವರ, ಸ್ಕಂದ ಆರಾಧನೆ ಶುಭಪ್ರದ. ಶುಭದಿನ: 16, 18
—-