Sunday, July 3, 2022

Latest Posts

ವಾಹನ ಸವಾರರಿಗೆ ಗುಡ್ ನ್ಯೂಸ್: ಮುಂದಿನ 2 ವರ್ಷಗಳಲ್ಲಿ ಟೋಲ್ ಬೂತ್ ಮುಕ್ತ!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಷ್ಟ್ರೀಯ ಹೆದ್ದಾರಿಗಳಲ್ಲಿ ನೂತನ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸಿದ್ಧತೆ ನಡೆಸುತ್ತಿದೆ ಎಂದು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಡೆ ರಹಿತ ಸಂಚಾರಕ್ಕಾಗಿ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜಿಪಿಎಸ್ ಆಧಾರಿತ ತಂತ್ರಜ್ಞಾನವನ್ನ ಕೇಂದ್ರಸರ್ಕಾರ ಅಂತಿಮಗೊಳಿಸಿದೆ.

ಮುಂದಿನ 2 ವರ್ಷಗಳಲ್ಲಿ ಹೆದ್ದಾರಿಗಳು ಟೋಲ್ ಬೂತ್ ಮುಕ್ತವಾಗಲಿವೆ.  ಜಿಪಿಎಸ್ ತಂತ್ರಜ್ಞಾನದ ನೆರವಿನಿಂದಾಗಿ ವಾಹನಗಳ ಚಲನೆಯ ಆಧಾರದ ಮೇಲೆ ಟೋಲ್ ಹಣ ಬ್ಯಾಂಕ್ ಖಾತೆಯಿಂದ ನೇರವಾಗಿ ಕಡಿತವಾಗಲಿದೆ.

ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ಬಂದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಐದು ವರ್ಷಗಳಲ್ಲಿ 1.34 ಲಕ್ಷ ಕೋಟಿ ಆದಾಯ ಸಂಗ್ರಹವಾಗಲಿದೆ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss