Wednesday, June 29, 2022

Latest Posts

ವಿಜಯಪುರದಲ್ಲಿ ನಿರಾತಂಕವಾಗಿ ನಡೆದ ಎಸ್ಸೆಸೆಲ್ಸಿ ಮೊದಲ ಪರೀಕ್ಷೆ, 1888 ವಿದ್ಯಾರ್ಥಿಗಳು ಗೈರು

ವಿಜಯಪುರ: ಕೊರೋನಾ ಕಂಟಕದಲ್ಲೂ ಜಿಲ್ಲೆಯಾದ್ಯಂತ ಗುರುವಾರ ಆರಂಭಗೊಂಡ ಮೊದಲ ದಿನದ ಎಸ್ಸೆಸ್ಸೆಲ್ಸಿ ಪರೀಕ್ಷೆ 121 ಕೇಂದ್ರಗಳಲ್ಲಿ ನಿರಾಂತಕವಾಗಿ ನಡೆದಿದೆ. ದ್ವಿತೀಯ ಭಾಷೆ ಇಂಗ್ಲಿಷ್ ಪರೀಕ್ಷೆ ಬರೆಯಬೇಕಿದ್ದ 36,720 ರ ಪೈಕಿ 1888 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, 34,832 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಕೊರೋನಾ ಮುನ್ನೆಚ್ಚರಿಕೆಯಾಗಿ ಪರೀಕ್ಷೆ ಆಗಮಿಸಿದ ಪರೀಕ್ಷಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಜರ್ ಮಾಡುವ ಮೂಲಕ ಸಾಮಾಜಿಕ ಅಂತರ ಕಾಪಾಡಿಕೊಂಡು ಪರೀಕ್ಷೆ ಕೊಠಡಿಗೆ ಬಿಡಲಾಯಿತು. ಪ್ರತಿ ವಿದ್ಯಾರ್ಥಿ ಮಾಸ್ಕ್ ಧರಿಸಿಕೊಂಡು ಪರೀಕ್ಷೆ ಬರೆಯಲು ಮುಂದಾದರು.
ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶ ವ್ಯಾಪ್ತಿಯಲ್ಲಿ 144 ಕಲಂ ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದು, ಯಾವುದೇ ರೀತಿಯ ಝರಾಕ್ಸ್, ಕಂಪ್ಯೂಟರ್, ಇಂಟರ್‌ನೆಟ್ ಕೆಫೆ, ಕೋಚಿಂಗ್ ಸೆಂಟರ್‌ಗಳನ್ನು ತೆರೆಯುವುದನ್ನು ನಿಷೇಧಿಸಲಾಗಿತ್ತು.
ಮೂರು ಅಡಿ ಅಂತರದೊಂದಿಗೆ ಮಕ್ಕಳಿಗೆ ಆಸನದ ವ್ಯವಸ್ಥೆ ಪ್ರತಿಯೊಂದು ಡೆಸ್ಕ್ಗೆ ಇಬ್ಬರು ವಿದ್ಯಾರ್ಥಿಗಳು ಒಳಗೊಂಡಂತೆ ಪ್ರತಿ ಬ್ಲಾಕ್‌ದಲ್ಲಿ ಕನಿಷ್ಠ 18 ಹಾಗೂ ಗರಿಷ್ಠ 20 ಮಕ್ಕಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ಸಹ ನೇಮಿಸಲಾಗಿದೆ. ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಯಾವುದೇ ಸಮಸ್ಯೆಯಿಲ್ಲದೆ ಮೊದಲ ದಿನದ ಪರೀಕ್ಷೆಯನ್ನು ವಿದ್ಯಾರ್ಥಿಗಳು ಬರೆದಿದ್ದಾರೆ. ಪ್ರತಿ ವಿದ್ಯಾರ್ಥಿಗೆ ಮಾಸ್ಕ್ ವಿತರಿಸುವ ಜೊತೆಗೆ ಕೊರೋನಾ ಮುನ್ನೆಚ್ಚರಿಗೆ ವಹಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪ್ರಸನ್ನಕುಮಾರ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss