Wednesday, August 10, 2022

Latest Posts

ವಿಜಯಪುರ|ಮಂಗಳವಾರ 121 ಮಂದಿಗೆ ಕೊರೋನಾ ದೃಢ, 197 ಮಂದಿ ಗುಣಮುಖ, ಇಬ್ಬರ ಸಾವು

ವಿಜಯಪುರ: ಜಿಲ್ಲೆಯಲ್ಲಿ ಮಂಗಳವಾರ 121 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 4094 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಕೊರೋನಾ ಸೊಂಕಿಗೆ 82 ವರ್ಷದ (ಪಿ 170277) ವೃದ್ಧ, 55 ವರ್ಷದ (ಪಿ 186331) ವ್ಯಕ್ತಿ ಮೃತಪಟ್ಟಿದ್ದು, ಇವರು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಜಿಲ್ಲೆಯಲ್ಲಿ ಈವರೆಗೆ ಒಟ್ಟು 43 ಜನರು ಕೊರೋನಾಗೆ ಸಾವಿಗೀಡಾಗಿದ್ದಾರೆ. ಇಂದು ಮತ್ತೆ 197 ರೋಗಿಗಳು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇಲ್ಲಿವರೆಗೆ 3099 ರೋಗಿಗಳು ಗುಣಮುಖಗೊಂಡು ಮನೆಗೆ ತೆರಳಿದ್ದಾರೆ. ಇನ್ನೂ 952 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss