Saturday, July 2, 2022

Latest Posts

ವಿಜಯಪುರ | ಇಬ್ಬರಲ್ಲಿ ಸೋಂಕು ಪತ್ತೆ, ಸೋಂಕಿತರ ಸಂಖ್ಯೆ 81 ಕ್ಕೆ ಏರಿಕೆ: ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ

ವಿಜಯಪುರ: ಜಿಲ್ಲೆಯಲ್ಲಿ ಗುರುವಾರ ಮತ್ತೆ ಇಬ್ಬರಲ್ಲಿ ಸೋಂಕು ಪತ್ತೆಯಾಗಿದ್ದು, ಐದು ಜನರು ಮೃತಪಟ್ಟಿರುವುದು ಸೇರಿದಂತೆ ಸೋಂಕಿತರ ಸಂಖ್ಯೆ 81 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಮಹಾರಾಷ್ಟçದಿಂದ ಆಗಮಿಸಿದ ರೋಗಿ ಸಂಖ್ಯೆ 2420ರ 32 ವರ್ಷದ ವ್ಯಕ್ತಿ ಹಾಗೂ ರೋಗಿ ಸಂಖ್ಯೆ 2421ರ 23 ವರ್ಷದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದ್ದು, ಇವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಸೋಂಕಿನಿಂದ ಬಳಲುತ್ತಿದ್ದವರಲ್ಲಿ ಮತ್ತೆ 6 ರೋಗಿಗಳು ಗುಣಮುಖಗೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ರೋಗಿ ಸಂಖ್ಯೆ 1728ರ 29 ವರ್ಷದ ಮಹಿಳೆ, ರೋಗಿ ಸಂಖ್ಯೆ 1729ರ 20 ವರ್ಷದ ಪುರುಷ, ರೋಗಿ ಸಂಖ್ಯೆ 411ರ 30 ವರ್ಷದ ಮಹಿಳೆ, ರೋಗಿ ಸಂಖ್ಯೆ 1091ರ 4 ವರ್ಷದ ಬಾಲಕಿ, ರೋಗಿ ಸಂಖ್ಯೆ 1494ರ 30 ವರ್ಷದ ವ್ಯಕ್ತಿ ಹಾಗೂ ರೋಗಿ ಸಂಖ್ಯೆ 1122ರ 35 ವರ್ಷದ ಮಹಿಳೆ ಸೇರಿದಂತೆ 6 ಜನರು ಬಿಡುಗಡೆಗೊಂಡಿದ್ದಾರೆ. ಇಲ್ಲಿವರೆಗೆ ಒಟ್ಟು 54 ಸೋಂಕಿತರು ಗುಣಮುಖಗೊಂಡು ಬಿಡುಗಡೆಗೊಂಡಿದ್ದಾರೆ ಎಂದರು.
ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 27,383 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. 5820 ಜನರು 28 ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. 21,510 ಜನರು (1 ರಿಂದ 28 ದಿನಗಳ) ರಿರ್ಪೋಟಿಂಗ್ ಅವಧಿಯಲ್ಲಿದ್ದಾರೆ. ಈವರೆಗೆ 22,065 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 10,876 ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ 11,108 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss