Tuesday, July 5, 2022

Latest Posts

ವಿಜಯಪುರ| ಎನ್‌ಟಿಪಿಸಿ ಕಾರ್ಮಿಕನಿಗೆ ಕೊರೋನಾ ಪಾಸಿಟಿವ್ ದೃಢ

ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕೂಡಗಿಯ ಎನ್‌ಟಿಪಿಸಿಯಲ್ಲಿ ಕೆಲಸ ಮಾಡುವ 57 ವರ್ಷದ ವ್ಯಕ್ತಿಯೊಬ್ಬನಿಗೆ
(ಪಿ 10321) ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಈ ವ್ಯಕ್ತಿಯು ಉತ್ತರ ಪ್ರದೇಶದಿಂದ ಜೂನ್ 12 ರಂದು ಜಿಲ್ಲೆಗೆ ಆಗಮಿಸಿದ್ದು, ಜೂನ್ 14 ರಂದು ಈ ವ್ಯಕ್ತಿಗೆ ಹೋಮ್ ಕ್ವಾರಂಟೈನ್ ಮಾಡಲಾಗಿತ್ತು. ಈ ವೇಳೆ ಸೋಂಕಿನ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಸಂಬಂಧಿಸಿದ ವೈದ್ಯರು ಗಂಟಲು ದ್ರವ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಸೋಂಕಿತ ವ್ಯಕ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸೀಲ್‌ಡೌನ್‌ಗೆ ಅವಶ್ಯಕ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss