Wednesday, August 10, 2022

Latest Posts

ವಿಜಯಪುರ| ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 623 ಅಂಕ ಪಡೆದ ಅಕ್ಷತಾ!

ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಆದರ್ಶ ವಿದ್ಯಾನಿಲಯ ಶಾಲೆಯ ವಿದ್ಯಾರ್ಥಿನಿ ಅಕ್ಷತಾ ರಾಠೋಡ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 623 ಅಂಕ ಪಡೆದು ವಿಶೇಷ ಸಾಧನೆ ಮಾಡಿದ್ದಾಳೆ.
ವಿದ್ಯಾರ್ಥಿನಿ ಅಕ್ಷತಾ ರಾಠೋಡ, ಗಣಿತ ವಿಷಯ ಹೊರತು ಪಡಿಸಿ ಉಳಿದೆಲ್ಲ ವಿಷಯಕ್ಕೆ ನೂರಕ್ಕೆ ನೂರರಷ್ಟು ಅಂಕ ಪಡೆದಿದ್ದಾಳೆ. ಕನ್ನಡ 100, ಇಂಗ್ಲಿಷ್ 125, ಗಣಿತ 98, ಸಮಾಜ ವಿಜ್ಞಾನ 100, ವಿಜ್ಞಾನ 100, ಹಿಂದಿ 100 ಅಂಕ ಪಡೆದಿದ್ದಾಳೆ.
ಅಕ್ಷತಾಳ ತಂದೆ ಶಶಿಕಾಂತ ರಾಠೋಡ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದು, ವಿದ್ಯಾರ್ಥಿನಿಯ ಸಾಧನೆಗೆ ಕುಟುಂಬದವರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss