Saturday, August 13, 2022

Latest Posts

ವಿಜಯಪುರ: ಎಸ್‌ಟಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಧರಣಿ

ವಿಜಯಪುರ: ಎಸ್‌ಟಿ (ಪರಿಶಿಷ್ಟ ಪಂಗಡ) ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಜಿಲ್ಲೆಯ ತಳವಾರ ಮತ್ತು ಪರಿವಾರ ಸಮಾಜದ ಮುಖಂಡರು ಭಾನುವಾರ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಹಾಗೂ ಜಿಲ್ಲೆಯ ಎಲ್ಲ ಶಾಸಕರ ಮತ್ತು ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕಿ ಧರಣಿ ನಡೆಸಿ, ಮನವಿ ಸಲ್ಲಿಸಿದರು.

ತಳವಾರ ಮತ್ತು ಪರಿವಾರ ಸಮಾಜದವರಿಗೆ ಎಸ್‌ಟಿ ಮೀಸಲು ಪ್ರಮಾಣ ಪತ್ರ ನೀಡುವಂತೆ ಹಮ್ಮಿಕೊಂಡಿರುವ ಹೋರಾಟಕ್ಕೆ ಜನಪ್ರತಿನಿಧಿಗಳು ಬೆಂಬಲಿಸಬೇಕು. ಅಲ್ಲದೆ ಸದನದಲ್ಲಿ ತಳವಾರ ಮತ್ತು ಪರಿವಾರ ಸಮುದಾಯಕ್ಕೆ ಎಸ್‌ಟಿ ಪ್ರಮಾಣ ಪತ್ರ ನೀಡುವಂತೆ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿದರು.

ಎಸ್‌ಟಿ ಪ್ರಮಾಣ ಪತ್ರ ನೀಡದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss