ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ವಿಜಯಪುರ:
ಕೊರೋನಾ ರೂಪಾಂತರಿ ಎರಡನೇ ಅಲೆಯ ತೀವ್ರತೆಗೆ ಆಘಾತಗೊಂಡ ಜಿಲ್ಲೆಯ ಜನರಿಗೆ ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗಿರುವುದು ತಲ್ಲಣ ಮೂಡಿಸುವಂತಾಗಿದೆ.
ಜಿಲ್ಲೆಯಲ್ಲಿ 20 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗಿದ್ದು, ಬ್ಲ್ಯಾಕ್ ಫಂಗಸ್ ಪ್ರಕರಣಕ್ಕೆ ಪ್ರತ್ಯೇಕ ವಾರ್ಡ್ ಮಾಡಿ, ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಹೆಚ್ಚು ಪ್ರಕರಣಗಳಿರುವ ಸಾಧ್ಯತೆ ಇದ್ದು, ಸಂಜೆ ವೇಳೆಗೆ ನಿಖರವಾಗಿ ತಿಳಿಯಲಿದೆ.
ಜಿಲ್ಲಾಸ್ಪತ್ರೆಯಲ್ಲಿ ಇನ್ನೂ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಅಂತಹ ಪ್ರಕರಣ ಬಂದರೆ ಅಲ್ಲೂ ಬೆರೋಂದು ವಾರ್ಡ್ ಮಾಡುವ ಯೋಚನೆ ಇದೆ. ಸಂಜೆ ವರೆಗೂ ಇದಕ್ಕೆ ಸ್ಪಷ್ಟತೆ ಸಿಗುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮಾಹಿತಿ ನೀಡಿದ್ದಾರೆ.