Wednesday, July 6, 2022

Latest Posts

ವಿಜಯಪುರ| ಕೊರೋನಾ ದಟ್ಟ ಕಾರ್ಮೋಡದ ಮಧ್ಯೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ

ವಿಜಯಪುರ: ಕೊರೋನಾ ದಟ್ಟ ಕಾರ್ಮೋಡದ ಮಧ್ಯೆಯೂ ಜಿಲ್ಲೆಯಾದ್ಯಂತ ಜೂನ್ 25 ರಿಂದ ಜುಲೈ 4 ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾಹಿತಿ ನೀಡಿ, ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು 106 ಮುಖ್ಯ ಪರೀಕ್ಷಾ ಕೇಂದ್ರ ಹಾಗೂ 15 ಉಪ ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 121 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 37,122 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ನಗರದಲ್ಲಿ ಬಾಹ್ಯ ವಿದ್ಯಾರ್ಥಿಗಳ 4 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅಲ್ಲದೆ ಕಂಟೇನ್ಮೆಂಟ್ ವಲಯದಿಂದ 103 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಈ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ. ಎನ್- 95 ಮಾಸ್ಕ್ಗಳ ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಕ್ಕೆ ಬರಲು 147 ಬಸ್‌ಗಳ ವ್ಯವಸ್ಥೆ ಇದ್ದು, 107 ರೂಟ್‌ಗಳಲ್ಲಿ ಬಸ್ ಸಂಚರಿಸಲಿವೆ. ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಕರೆತರಲು ಆಯಾ ವಿದ್ಯಾರ್ಥಿಗಳಿಗೆ 141 ಬಸ್‌ಗಳ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳಿಗೆ ಕೋವಿಡ್-19 ಕುರಿತ ಮುನ್ನೆಚ್ಚರಿಕೆ ಮಾಹಿತಿ ನೀಡುವ ಪೋಸ್ಟರ್‌ಗಳನ್ನು ಲಗತ್ತಿಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಜರ್ ವ್ಯವಸ್ಥೆ ಇದ್ದು, ಅಲ್ಲದೆ ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಜ್ ಮಾಡಲಾಗಿದೆ. ಒಂದು ವೇಳೆ ಪರೀಕ್ಷಾ ಕೇಂದ್ರದಲ್ಲಿ ಆಕಸ್ಮಿಕವಾಗಿ ಕೋವಿಡ್-19 ಪ್ರಕರಣಗಳು ಕಂಡುಬಂದಲ್ಲಿ ಪ್ರತಿ ತಾಲೂಕಿನಲ್ಲಿ ಎರಡು ಪ್ರತ್ಯೇಕ ಪರೀಕ್ಷಾ ಕೇಂದ್ರಗಳನ್ನು ಕಾಯ್ದಿರಿಸಿದ ಕೇಂದ್ರಗಳೆಂದು ಗೊತ್ತುಪಡಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಕ್ಲಾಸ್-2 ಸ್ಥಳೀಯ ಜಾಗೃತದಳವೆಂದು ನೇಮಿಸಲಾಗಿದೆ. ಅದರಂತೆ ತಲಾ ಒಬ್ಬರನ್ನು ತಾಲೂಕು ವೀಕ್ಷಕರನ್ನು ನಿಯೋಜಿಸಿದೆ. ಪ್ರತಿ ಕೇಂದ್ರದಲ್ಲಿ ಹೆಲ್ತ್ಕೌಂಟರ್ ತೆರೆಯಲಾಗುತ್ತಿದ್ದು, ವೈದ್ಯರು, ಆರೋಗ್ಯ ಸಹಾಯಕರು ಇರಲಿದ್ದು, ಥರ್ಮಲ್ ಸ್ಕ್ಯಾನಿಂಗ್, ಮಕ್ಕಳಿಗೆ ಸ್ಯಾನಿಟೈಜರ್ ಹಾಗೂ ಪ್ರತಿ ಬ್ಲಾಕ್‌ನಲ್ಲಿ 18 ರಿಂದ 20 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ವಿವಿಧ ಜನಪ್ರತಿನಿಧಿಗಳು ಮತ್ತು ಟ್ರಸ್ಟ್ಗಳಿಂದ ಪೂರೈಸಿದ 1 ಲಕ್ಷ ಮಾಸ್ಕ್ಗಳನ್ನು ವಿದ್ಯಾರ್ಥಿಗಳಿಗೆ ನೀಡಲು ಕ್ರಮ ಕೈಗೊಳಲಾಗಿದೆ ಎಂದು ಹೇಳಿದರು.
ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶ ವ್ಯಾಪ್ತಿಯಲ್ಲಿ 144 ಕಲಂ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಯಾವುದೇ ರೀತಿಯ ಝರಾಕ್ಸ್, ಕಂಪ್ಯೂಟರ್, ಇಂಟರ್‌ನೆಟ್ ಕೆಫೆ, ಕೋಚಿಂಗ್ ಸೆಂಟರ್‌ಗಳನ್ನು ತೆರೆಯುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇತರರಿಗೆ ಕಾಂಪೌಂಡ್ ಒಳಗಡೆ ಅವಕಾಶ ಇರುವುದಿಲ್ಲ. ಗುಂಪು ಗುಂಪಾಗಿ ಸೇರಲು ನಿಷೇಧವಿದ್ದು, ಪಾಲಕರು, ಸಾರ್ವಜನಿಕರು ಮಕ್ಕಳಿಗೆ ಪರೀಕ್ಷಾ ಸಮಯದಲ್ಲಿ ಬಿಟ್ಟು ತೆರಳಬೇಕು. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss